ಇಂದು ಸಂಜೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ - Mahanayaka
5:02 AM Saturday 17 - January 2026

ಇಂದು ಸಂಜೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ

modi
07/06/2021

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ  ದೇಶವನ್ನುದ್ದೇಶಿಸಿ ಮಾತನಾಡಲಿದ್ದು,  ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ ಎಂದು ಹೇಳಲಾಗಿದೆ.

ಕೊರೊನಾದಿಂದ ವಿವಿಧ ರಾಜ್ಯಗಳಲ್ಲಿ ಲಾಕ್ ಡೌನ್ ಘೋಷಣೆಯಾಗಿ ಜನರು ಸಂಕಷ್ಟದಲ್ಲಿದ್ದಾರೆ. ಜನರು ತಮ್ಮ ಜೀವನೋಪಾಯವನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಅಂಗಡಿಗಳಿಗೆ ಬೀಗ ಬಿದ್ದಿದೆ. ಇಂತಹ ಸಂಕಷ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು  ಇಂದು ಯಾವ ವಿಚಾರದ ಬಗ್ಗೆ ಮಾತನಾಡಲಿದ್ದಾರೆ ಎನ್ನುವ ಬಗ್ಗೆ ಸಹಜವಾಗಿ ಕುತೂಹಲ ಮೂಡಿದೆ.

ಜೀವನೋಪಾಯವನ್ನು ಕಳೆದುಕೊಂಡಿರುವ ದೇಶದ ಜನತೆ ಸಾಂತ್ವಾನದ ಜೊತೆಗೆ ಆರ್ಥಿಕ ಭದ್ರತೆಯ ನಿರೀಕ್ಷೆಯಲ್ಲಿ ಕೂಡ ಇದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ಯೋಜನೆಗಳನ್ನು ಘೋಷಿಸುತ್ತಾರೆ ಎನ್ನುವ ನಿರೀಕ್ಷೆಯಲ್ಲಿ ಜನರಿದ್ದಾರೆ.

ಇತ್ತೀಚಿನ ಸುದ್ದಿ