ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ
ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ಸುಮಾರು ಎರಡೂವರೆ ಗಂಟೆ ಕಾಲ ನಡೆದ ರೋಡ್ ಶೋದಲ್ಲಿ ಮೋದಿ ಅವರು 13 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ್ದಾರೆ. ಮೊದಲ ದಿನದ ರೋಡ್ ಶೋದಲ್ಲಿ ಮೋದಿ 26 ಕಿ.ಮೀ.ಗೂ ಹೆಚ್ಚು ಸಂಚರಿಸಿದ್ದಾರೆ.
ಜೆ.ಪಿ. ನಗರದ ಬ್ರಿಗೇಡ್ ಮಿಲೇನಿಯಂನ ಬಳಿ ಆರಂಭವಾದ ರೋಡ್ ಶೋ ಮಲ್ಲೇಶ್ವರದ ಸರ್ಕಲ್ ಮಾರಮ್ಮ ದೇವಸ್ಥಾನದ ಬಳಿ ಅಂತ್ಯವಾಯಿತು. ರೋಡ್ ಶೋ ಕೊನೆಯಲ್ಲಿ ಮೋದಿ ಅವರು ಕಾಡುಮಲ್ಲೇಶ್ವರ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಇದೇ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಬೆಂಗಳೂರು ಬಿಜೆಪಿಯನ್ನು ಬಯಸುತ್ತಿದೆ ಎಂಬುದು ಸ್ಪಷ್ಟ. ನಮ್ಮ ಪಕ್ಷವು ಉತ್ತಮ ಆಡಳಿತ ಮತ್ತು ಅಭಿವೃದ್ಧಿಯನ್ನು ನೀಡುವುದನ್ನು ಮುಂದುವರಿಸಲಿದೆ ಎಂಬ ಬಗ್ಗೆ ಈ ನಗರದ ಜನತೆಗೆ ನಂಬಿಕೆ ಇದೆ ಎಂದು ಮೋದಿ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























