ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಪಡೆದುಕೊಳ್ಳಲೇಬೇಕು: ಗೃಹ ಇಲಾಖೆ ಆದೇಶ - Mahanayaka
10:59 PM Saturday 18 - October 2025

ಸರ್ಕಾರಿ ಜಾಗದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಪಡೆದುಕೊಳ್ಳಲೇಬೇಕು: ಗೃಹ ಇಲಾಖೆ ಆದೇಶ

vidhanasoudha
18/10/2025

ಬೆಂಗಳೂರು: ಖಾಸಗಿ ವ್ಯಕ್ತಿಗಳು, ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸುವುದಕ್ಕೂ ಮುನ್ನ ಪೊಲೀಸ್ ಕಮಿಷನರ್ ಅಥವಾ ಜಿಲ್ಲಾ ಎಸ್‌ ಪಿ ಅವರಿಂದ ಪೂರ್ವಾನುಮತಿ ಪಡೆದುಕೊಳ್ಳಲೇಬೇಕು ಎಂದು ಗೃಹ ಇಲಾಖೆಯು ಅ.18ರಂದು ಹೊರಡಿಸಿದ ಆದೇಶದಲ್ಲಿ ಹೇಳಿದೆ.


Provided by

ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಮತ್ತು ಅದಕ್ಕೆ ಅನುಮತಿ ಪಡೆದುಕೊಳ್ಳಲು ಷರತ್ತುಗಳನ್ನು ರೂಪಿಸಿ, ಇಲಾಖೆಯು ಆದೇಶ ಹೊರಡಿಸಿದೆ. ನೋಂದಣಿ ಮಾಡಿಸಿದ ಅಥವಾ ನೋಂದಣಿ ಮಾಡಿಸದ ಸಂಘಟನೆಗಳಿಗೂ ಇದು ಅನ್ವಯವಾಗುತ್ತದೆ. ಸಾರ್ವಜನಿಕ ರಸ್ತೆಗಳಲ್ಲಿ ಮೆರವಣಿಗೆ, ಕಾರ್ಯಕ್ರಮ ನಡೆಸುವ ಪೂರ್ವದಲ್ಲಿಯೇ ಅನುಮತಿ ಪಡೆಯುವುದು ಕಡ್ಡಾಯವಾಗಲಿದೆ.

ಈ ಪ್ರಕಾರ ಯಾವುದೇ ಖಾಸಗಿ ವ್ಯಕ್ತಿ ಅಥವಾ ಸಂಘಟನೆಗಳು ಕಾರ್ಯಕ್ರಮ ಆಯೋಜಿಸುವುದಕ್ಕೂ ಕನಿಷ್ಠ ಮೂರು ದಿನ ಮೊದಲು ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ಸಂಬಂಧಿತ ಇಲಾಖೆ, ರಸ್ತೆ ಬಳಸುವುದಿದ್ದರೆ ಸ್ಥಳೀಯ ಸಂಸ್ಥೆಗಳು ಅಥವಾ ಲೋಕೋಪಯೋಗಿ ಇಲಾಖೆ, ಅಗ್ನಿಶಾಮಕ ದಳ ಮತ್ತು ಎಸ್ಕಾಂಗಳಿಂದ ನಿರಾಕ್ಷೇಪಣಾ ಪತ್ರ (ಎನ್‌ ಒಸಿ) ಪಡೆದುಕೊಳ್ಳಬೇಕು ಸೂಚಿಸಿದೆ.

ಕಾರ್ಯಕ್ರಮ ಅಥವಾ ಮೆರವಣಿಗೆ ವೇಳೆ ಸಾರ್ವಜನಿಕ ಸ್ವತ್ತಿಗೆ ಹಾನಿಯಾದರೆ, ಪೂರ್ವಾನುಮತಿಗಾಗಿ ಅರ್ಜಿ ಸಲ್ಲಿಸಿದ್ದವರೇ ಅದರ ಹೊಣೆ ಹೊರಬೇಕಾಗುತ್ತದೆ. ಜತೆಗೆ ಇಂತಹ ಕಾರ್ಯಕ್ರಮಗಳ ವೇಳೆ ಕಾನೂನುಬಾಹಿರ ಚಟುವಟಿಕೆಗಳು, ಅಪರಾಧ ಕೃತ್ಯಗಳು ಸಂಭವಿಸಿದರೆ ಅವರ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ