ಕೊಲೆ ಪ್ರಕರಣದ ವಿಚಾರಣಾಧೀನ ಕೈದಿ ಕಾರಾಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ - Mahanayaka

ಕೊಲೆ ಪ್ರಕರಣದ ವಿಚಾರಣಾಧೀನ ಕೈದಿ ಕಾರಾಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ

sadananda sherigar
11/12/2022


Provided by

ಉಡುಪಿ: ಒತ್ತಿನೆಣೆ ಕೊಲೆ ಪ್ರಕರಣದ ಆರೋಪಿ, ವಿಚಾರಣಾಧೀನ ಕೈದಿಯೊಬ್ಬ ಹಿರಿಯಡ್ಕ ಅಂಜಾರಿನಲ್ಲಿರುವ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಕಾರ್ಕಳ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಶೇರಿಗಾರ್(52) ಆತ್ಮಹತ್ಯೆ ಮಾಡಿಕೊಂಡ ಕೈದಿ. ಬಂಧಿತನಾದ ಬಳಿಕ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಈತ ಜೀವನದಲ್ಲಿ ಜಿಗುಪ್ಸೆಗೊಂಡು, ಜೈಲಿನ 20 ಮಂದಿ ಕೈದಿಗಳಿದ್ದ ಕೊಠಡಿಯಲ್ಲಿ ಪಂಚೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಹಿರಿಯಡ್ಕ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈತ ತನ್ನ ಪ್ರೇಯಸಿ ಹಾಗೂ ಇತರ ಇಬ್ಬರ ಸಹಕಾರದೊಂದಿಗೆ ಆನಂದ ದೇವಾಡಿಗ ಎಂಬವರನ್ನು ಜು.12ರಂದು ಬೈಂದೂರು ಶಿರೂರು ಸಮೀಪದ ಹೇನಬೇರು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಕಾರಿಗೆ ಪೆಟ್ರೋಲ್ ಹಾಕಿ ಸುಟ್ಟು ಕೊಲೆ ಮಾಡಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ