ಪ್ರೀತಿಯ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ವೈರಲ್ ಮಾಡಿದ ಪಾಪಿಗಳು! - Mahanayaka
11:52 AM Tuesday 18 - November 2025

ಪ್ರೀತಿಯ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ವೈರಲ್ ಮಾಡಿದ ಪಾಪಿಗಳು!

newdelhi
05/10/2022

ನವದೆಹಲಿ: ಬಾಲಕಿಯ ಜೊತೆಗೆ ಪ್ರೀತಿಯ ನಾಟಕವಾಡಿ, ಆಕೆಯ ಮೇಲೆ ಅತ್ಯಾಚಾರ ನಡೆಸಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘನ್ ಪುರದ ಜನಗಮ ಜಿಲ್ಲಾ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಅಧಿಕಾರಿ ರಘುಚಂದರ್‍ ಈ ಕುರಿತು ಮಾಹಿತಿ ನೀಡಿದ್ದು, ಚಿಲ್ಪುರ್ ಮಂಡಲದ ಶ್ರೀಪತಿಪಲ್ಲಿಯ ಗುರ್ರಾಮ್ ಶ್ಯಾಮ್ ಮತ್ತು ತುಪಕುಲಾ ಸಾಂಬರಾಜು ಶ್ಯಾಮ್ ಬಂಧಿತ ಆರೋಪಿಗಳಾಗಿದ್ದಾರೆ.

ಗುರ್ರಾಮ್ ಶ್ಯಾಮ್ 16 ವರ್ಷದ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿದ್ದ. ಬಳಿಕ ಸಾಂಬರಾಜು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದನ್ನು ಗುರ್ರಾಮ್ ಶ್ಯಾಮ್ ವೀಡಿಯೋ ಮಾಡಿದ್ದ. ಬಳಿಕ ಈ ವೀಡಿಯೋವನ್ನು ಪರಿಚಿತರಿಗೆ ಕಳುಹಿಸಿದ್ದು, ಅದು ವೈರಲ್ ಆಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ವಿಷಯ ಪೋಷಕರಿಗೆ ತಿಳಿದಿದ್ದು, ಅವರು ಚಿಲ್ಪುರ್‍ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ವಿಡಿಯೋ ವೈರಲ್ ಮಾಡಿದ ಬಳಿಕ ಇತರ ನಾಲ್ವರು ಹುಡುಗಿಯರಿಗೆ ಇದೇ ವಿಡಿಯೋ ತೋರಿಸಿ, ನಾವು ಹೇಳಿದಂತೆ ಕೇಳದಿದ್ದರೆ, ನಿಮ್ಮ ವಿಡಿಯೋಗಳನ್ನೂ ಇದೇ ರೀತಿ ತೆಗೆದು ವೈರಲ್ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು  ಎನ್ನಲಾಗಿದೆ.

ಸದ್ಯ ಆರೋಪಿಗಳ ವಿರುದ್ಧ ಅತ್ಯಾಚಾರ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ರಿಮಾಂಡ್ ಗೆ ಕಳುಹಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ