ಖಾಸಗಿ ಆ್ಯಂಬುಲೆನ್ಸ್ ಮಗುಚಿ ಬಿದ್ದು ಚಾಲಕ ಸಾವು

shaber
18/08/2023

ರೋಗಿಯನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಆ್ಯಂಬುಲೆನ್ಸ್ ವಾಹನವೊಂದು ಪಲ್ಟಿಯಾಗಿ ವಾಹನ ಚಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ನಡೆದಿದೆ.

ಮೃತ ಅಂಬುಲೆನ್ಸ್ ಚಾಲಕನನ್ನು ಗುರುವಾಯನಕೆರೆ ನಿವಾಸಿ ಶಬೀರ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆ್ಯಂಬುಲೆನ್ಸ್ ವಾಹನ ವಗ್ಗ ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ ರಸ್ತೆ ಮಧ್ಯ ಪಲ್ಟಿಯಾಗಿದ್ದು, ಚಾಲಕ ಶಬೀರ್ ಗಂಭೀರವಾಗಿ ಗಾಯಗೊಂಡಿದ್ದರು.

ವಾಹನದಲ್ಲಿದ್ದ ರೋಗಿಯನ್ನು ಬದಲಿ ವಾಹನದಲ್ಲಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಆ್ಯಂಬುಲೆನ್ಸ್ ಚಾಲಕ ಶಬೀರ್ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

 

ಇತ್ತೀಚಿನ ಸುದ್ದಿ

Exit mobile version