ಕಾರಿಗೆ ಖಾಸಗಿ ಬಸ್ ಡಿಕ್ಕಿ: ತಂದೆ ಮಗಳಿಗೆ ಗಂಭೀರ ಗಾಯ

ಪುತ್ತೂರು(ದ.ಕ.ಜಿಲ್ಲೆ): ಖಾಸಗಿ ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ತಂದೆ ಮತ್ತು ಮಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ನಡೆದಿದೆ.
ಪುತ್ತೂರಿನಿಂದ ಮಂಗಳೂರು ಕಡೆಗೆ ಖಾಸಗಿ ಬಸ್ ಪ್ರಯಾಣಿಸುತ್ತಿತ್ತು. ಕಾರು ಪುತ್ತೂರಿನಿಂದ ಕೆದಿಲ ಎಂಬ ಕಡೆಗೆ ಸಾಗುತ್ತಿತ್ತು. ಮುರ ಬಳಿ ತಲುಪಿದ ವೇಳೆ ಕಾರು ಚಾಲಕ ಬಲಕ್ಕೆ ಕಾರು ತೆಗೆದುಕೊಂಡಿದ್ದು, ಈ ವೇಳೆ ಬಸ್ ಕಾರಿನ ಹಿಂಬದಿಗೆ ಡಿಕ್ಕಿಯಾಗಿದ್ದು, ಡಿಕ್ಕಿ ಹೊಡೆದ ತೀವ್ರತೆಗೆ ಕಾರಯ ಪಲ್ಟಿಯಾಗಿ ನಜ್ಜುಗುಜ್ಜಾಗಿದೆ.
ಕಾರಿನಲ್ಲಿ ಒಟ್ಟು ಮೂವರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದ ಮಗು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದೆ. ತಂದೆ ಮಗಳಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD