ಸ್ಟೇರಿಂಗ್ ಕಟ್ ಆಗಿ ಖಾಸಗಿ ಬಸ್ ಪಲ್ಟಿ: ಐವರಿಗೆ ಗಂಭೀರ ಗಾಯ

26/01/2025
ಚಿಕ್ಕಮಗಳೂರು : ಸ್ಟೇರಿಂಗ್ ಕಟ್ ಆಗಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಸ್ತೆ ಮಧ್ಯೆಯ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಮೈಸೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸ ಹೊರಟಿದ್ದ ಮೈಸೂರು ಅಪೋಲೋ ಸಿಬ್ಬಂದಿಗಳು ಗಾಯಗೊಂಡವರು ಎಂದು ಹೇಳಲಾಗಿದೆ.
ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: