ಖಾಸಗಿ ಬಸ್ ಪಲ್ಟಿ: 25ಕ್ಕೂ ಹೆಚ್ಚು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ…!

chikkamagaluru
19/07/2025

ಕೊಟ್ಟಿಗೆಹಾರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ದೇವನಗೂಲ್ ಗ್ರಾಮದ ಬಳಿ ನಡೆದಿದೆ.

ಬಸ್ಸಿನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾಫಿನಾಡ ನಿರಂತರ ಮಳೆಯಿಂದ ಮಲೆನಾಡ ಸೌಂದರ್ಯ ಇಮ್ಮಡಿಕೊಂಡಿದ್ದು ನಿತ್ಯ ಸಾವಿರಾರು ಪ್ರವಾಸಿಗರು ಜಿಲ್ಲೆಯ ನಾನಾ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ.

ಇಂದು ಕೂಡ ಕಳಸ ತಾಲೂಕಿನ ಕುದುರೆಮುಖದ ನೇತ್ರಾವತಿ ಪೀಕ್ ಗೆ ಟ್ರಕ್ಕಿಂಗ್ ಗೆಂದು ಬರುತ್ತಿದ್ದ ಬೆಂಗಳೂರು ಮೂಲದ ಖಾಸಗಿ ಬಸ್ ಮಳೆ–ಮಂಜುವಿನ ಕಾರಣದಿಂದಾಗಿ ತಿರುವಿನಲ್ಲಿ ಬಸ್ಸು ತಾಲೂಕಿನ ನಿಯಂತ್ರಣ ಪಲ್ಟಿಯಾಗಿದೆ.

ಕೂಡಲೇ ಸ್ಥಳೀಯರು ಬಸ್ಸಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ. 26ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರಗೊಂಡಿದೆ. ಬಸ್ಸಿನಲ್ಲಿದ್ದವರು ಬೆಂಗಳೂರಿನ ಎಂ.ಎನ್.ಸಿ. ಕಂಪನಿಯಲ್ಲಿ ಕೆಲಸ ಮಾಡುವ ಯುವಕ–ಯುವತಿಯರು. ವೀಕೆಂಡ್ ಹಿನ್ನೆಲೆ ಟ್ರಕ್ಕಿಂಗ್ ಗೆ ಎಂದು ಬರುವಾಗ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನ ಸಮಾಜ ಸೇವಕ ಆರೀಫ್, ಕೊಟ್ಟಿಗೆಹಾರ ಸಂಜಯ್, ಅತ್ತಿಗೆರೆ ಸಂತೋಷ್, ವಿನಯ್,  ಜಲಿಲ್, ವರುಣ್ ಸೇರಿದಂತೆ ಸ್ಥಳೀಯ ಯುವಕರು, ಮೂಡಿಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version