ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್‌ ಗೆ ಖಾಸಗಿ ಸಾರಿಗೆ ಒಕ್ಕೂಟ ಕರೆ - Mahanayaka
6:38 AM Thursday 18 - September 2025

ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್‌ ಗೆ ಖಾಸಗಿ ಸಾರಿಗೆ ಒಕ್ಕೂಟ ಕರೆ

banglore bandh
01/09/2023

ಶಕ್ತಿ ಯೋಜನೆ ಜಾರಿಯಾಗಿರುವ ಬಳಿಕ ಖಾಸಗಿ ಸಾರಿಗೆ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿರುವುದರಿಂದ ಈ ಸಮಸ್ಯೆಗೆ ಪರಿಹಾರ ನೀಡುವಂತೆ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರಕ್ಕೆ 10 ದಿನಗಳ ಗಡುವು ನೀಡಿತ್ತು. ಆದರೂ ಸರ್ಕಾರ ಸಮಸ್ಯೆಗೆ ಸರ್ಕಾರ ಯಾವುದೇ ಸ್ಪಂದನೆ ನೀಡದೇ ಹೋಗಿರುವ ಹಿನ್ನೆಲೆ ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್‌ಗೆ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದೆ.


Provided by

32 ಸಂಘಟನೆಗಳಿರುವ ರಾಜ್ಯದ ಖಾಸಗಿ ಸಾರಿಗೆ ಒಕ್ಕೂಟ ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಬಂದ್ ನಡೆಸುವುದಾಗಿ ತಿಳಿಸಿದೆ. ಸೆಪ್ಟೆಂಬರ್ 11 ಸೋಮವಾರ ಆಟೋ, ಟ್ಯಾಕ್ಸಿ, ಏರ್ ಪೋರ್ಟ್ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಕಾರ್ಪೋರೇಟ್ ವಾಹನಗಳು, ಸ್ಕೂಲ್ ಬಸ್ ಚಾಲಕರು, ಫ್ಯಾಕ್ಟರಿ ವಾಹನ, ಸ್ಟೇಜ್ ಗ್ಯಾರೇಜ್ ಬಸ್‌ಗಳು ಇರುವುದಿಲ್ಲ. ಭಾನುವಾರ ಮಧ್ಯರಾತ್ರಿಯಿಂದಲೇ ಬೆಂಗಳೂರು ಬಂದ್ ಇರಲಿದೆ ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ