ಪ್ರಿಯಾಂಕ್ ಖರ್ಗೆ ‘ಫಸ್ಟ್ ಕ್ಲಾಸ್ ಈಡಿಯಟ್’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಕಿಡಿ
ಬೆಂಗಳೂರು: ಕರ್ನಾಟಕದ ಪರ ಧ್ವನಿಯೆತ್ತಿದ ಪ್ರಿಯಾಂಕ್ ಖರ್ಗೆ(Priyank Kharge) ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sharma)ವಾಗ್ದಾಳಿ ನಡೆಸಿದ್ದು, ಪ್ರಿಯಾಂಕ್ ಖರ್ಗೆ ಅವರನ್ನ ‘ಫಸ್ಟ್ ಕ್ಲಾಸ್ ಈಡಿಯಟ್’ಎಂದು ಕರೆದಿದ್ದಾರೆ.
ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿರುವ ತೀರ್ಮಾನವನ್ನು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದರು.
ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ ಗೆ ಏಕೆ ಹೋಗುತ್ತಿವೆ? ಅವುಗಳು ವಾಸ್ತವದಲ್ಲಿ ಬಯಸಿರೋದು ಬೆಂಗಳೂರನ್ನು. ಆದರೆ ಕರ್ನಾಟಕಕ್ಕೆ ಬರಬೇಕಾದ ಹೂಡಿಕೆಗಳನ್ನು ಕೇಂದ್ರ ಸರ್ಕಾರ ಗುಜರಾತ್‌ಗೆ ತಿರುಗಿಸುತ್ತಿದೆ. ಗುಜರಾತ್ ಮತ್ತು ಅಸ್ಸಾಂನಲ್ಲಿ ಏನಿದೆ? ಅಲ್ಲಿ ಪ್ರತಿಭೆಗಳು ಇವೆಯೇ ಎಂದು ಪ್ರಶ್ನಿಸಿದ್ದರು.
ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ಸಿಡಿಮಿಡಿಗೊಂಡ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪ್ರಿಯಾಂಕ್ ಖರ್ಗೆ ಹೇಳಿಕೆ ಅಸ್ಸಾಂ ಯುವಕರ ಶ್ರಮ ಮತ್ತು ಪ್ರತಿಭೆಯನ್ನು ತೀವ್ರವಾಗಿ ಅವಹೇಳನ ಮಾಡುವಂತಿವೆ. ಅಸ್ಸಾಂನಲ್ಲಿ ಪ್ರತಿಭಾವಂತ ಯುವಕರು ಇಲ್ಲ ಎಂದು ಅವರು ಹೇಳಿರೋದು ಅಸ್ಸಾಂ ಯುವಜನರಿಗೆ ಮಾಡಿದ ಅವಮಾನ. ನಾವು ಅವರ ವಿರುದ್ಧ ಪ್ರಕರಣ ದಾಖಲಿಸಬಹುದು ಎಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD


























