ಪ್ರಧಾನಿ ಜೊತೆ ವೇದಿಕೆ ಹಂಚಿಕೊಂಡಿದ್ದ ವ್ಯಕ್ತಿ ಅತ್ಯಾಚಾರವೆಸಗಿ ದೇಶ ಬಿಟ್ಟು ಹೋಗಿದ್ದಾರೆ: ಪ್ರಿಯಾಂಕಾ ಗಾಂಧಿ ವಾಗ್ದಾಳಿ

30/04/2024

ಪ್ರಧಾನಿ ಮೋದಿಯ ಜೊತೆ ವೇದಿಕೆ ಹಂಚಿಕೊಂಡಿದ್ದ ವ್ಯಕ್ತಿ ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ದೇಶ ಬಿಟ್ಟು ಹೋಗಿದ್ದಾರೆ. ಆದರೂ ಪ್ರಧಾನಿಯವರಿಗೆ ಇದು ಗೊತ್ತಾಗಲಿಲ್ಲವೇಕೆ..? ವಿಪಕ್ಷ ನಾಯಕರು ಎಲ್ಲಿ ಹೋದರು ಅನ್ನುವ ಮಾಹಿತಿ ತಿಳಿದುಕೊಳ್ಳುವ ಪ್ರಧಾನಿಗೆ ಈ ವ್ಯಕ್ತಿಯ ಪರಾರಿ ಯಾಕೆ ಗೊತ್ತಾಗಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಕಲಬುರ್ಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರವಾಗಿ ಮತಯಾಚಿಸಲು ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ, ಆತನ ಪರವಾಗಿ ಮತಯಾಚಿಸಿದ ಮೋದಿ ಹಾಗೂ ಅಮಿತ್ ಶಾ ಈ ಬಗ್ಗೆ ಉತ್ತರಿಸಲಿ, ಚುನಾವಣೆ ಸಂದರ್ಭದಲ್ಲಿ ಮಹಿಳೆಯರ ಮಂಗಳಸೂತ್ರ ಆಭರಣಗಳ ಬಗ್ಗೆ ಮಾತನಾಡುವ ಮೋದಿ ಈಗ ಯಾಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.

ಒಲಿಂಪಿಕ್ಸ್ ಪದಕ ವಿಜೇತ ಮಹಿಳಾ ಕ್ರೀಡಾಪಟುಗಳ ಮೇಲೆ ಅತ್ಯಾಚಾರ ಆದಾಗ ಮೋದಿ ಯಾಕೆ ಸುಮ್ಮನಿದ್ದರೂ ಹತ್ರಾಸ್ ನಲ್ಲಿ ಮಹಿಳೆಯರನ್ನು ಅತ್ಯಾಚಾರ ಮಾಡಿ ಸುಟ್ಟು ಹಾಕಿದಾಗ ಅವರು ಯಾರ ಪರವಾಗಿದ್ದರು, ಅಪರಾಧಿಗಳ ರಕ್ಷಣೆ ಮಾಡಿದ್ದು ಯಾರ ಸರಕಾರ ಎಂದು ಪ್ರಿಯಾಂಕ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version