ಜುಲೈ 30 ರಂದು ಕೊಲ್ಲಾಪುರಕ್ಕೆ ಆಗಮಿಸಲಿದ್ದಾರೆ ಪ್ರಿಯಾಂಕಾ ಗಾಂಧಿ: ಕೈ ನಾಯಕಿಯ ಭೇಟಿಯ ಉದ್ದೇಶವೇನು..? - Mahanayaka
2:15 AM Wednesday 22 - October 2025

ಜುಲೈ 30 ರಂದು ಕೊಲ್ಲಾಪುರಕ್ಕೆ ಆಗಮಿಸಲಿದ್ದಾರೆ ಪ್ರಿಯಾಂಕಾ ಗಾಂಧಿ: ಕೈ ನಾಯಕಿಯ ಭೇಟಿಯ ಉದ್ದೇಶವೇನು..?

25/07/2023

ಚುನಾವಣೆ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ. ಹೀಗಾಗಿ ಇದೇ ಜುಲೈ 30 ರಂದು ಕೊಲ್ಲಾಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಸಭೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆಗಮಿಸಲಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆಯ ಸಿದ್ಧತೆಯಲ್ಲಿರುವ ಕಾಂಗ್ರೆಸ್‌ ಪಕ್ಷವು ಕೊಲ್ಲಾಪುರದಲ್ಲಿ ಮೆರವಣಿಗೆ, ಸಭೆಯನ್ನು ನಡೆಸಲಿದೆ. ಕರ್ನಾಟಕದ ಗೃಹಲಕ್ಷ್ಮೀ ಯೋಜನೆಯಂತೆ ಮಹಿಳೆಯರಿಗೆ ಇಲ್ಲಿಯೂ ಇದೇ ರೀತಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗೃಹ ಲಕ್ಷ್ಮಿ ಯೋಜನೆಯನ್ನು ಘೋಷಿಸಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳೆಯರು ನೇತೃತ್ವದ ಕುಟುಂಬಗಳಿಗೆ ತಿಂಗಳಿಗೆ 2,000 ಭರವಸೆ ನೀಡಿದ್ದರು.

ಈ ಮೊತ್ತವನ್ನು ನೇರವಾಗಿ ಕುಟುಂಬದ ಮಹಿಳೆಯ ಖಾತೆಗೆ ಜಮಾ ಮಾಡಲಾಗುತ್ತದೆ. ಈ ಯೋಜನೆಯಿಂದ 1.5 ಕೋಟಿಗೂ ಹೆಚ್ಚು ಮಹಿಳೆಯರು ಪ್ರಯೋಜನ ಪಡೆಯಲಿದ್ದಾರೆ ಎಂದು ಹೇಳಿದ್ದರು. ಕೈ ಸರ್ಕಾರ ಘೋಷಿಸಿದಂತೆ ಶಕ್ತಿ ಯೋಜನೆ ಜಾರಿಯಾಗಿದ್ದು ಇದಕ್ಕೂ ರಾಜ್ಯದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ