ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಜೈಲಿನಿಂದ ಬಿಡುಗಡೆ - Mahanayaka
9:03 AM Wednesday 27 - August 2025

ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಜೈಲಿನಿಂದ ಬಿಡುಗಡೆ

puneeth kerehalli
17/09/2023


Provided by

ಬೆಂಗಳೂರು: ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಹಿಂದೂ ಪರ ಹೋರಾಟಗಾರ, ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

ಪದೇ ಪದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಪುನೀತ್ ಕೆರೆಹಳ್ಳಿಯನ್ನು ಗೂಂಡಾ ಕಾಯ್ದೆಯಡಿಯಲ್ಲಿ  ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.  ಆಗಸ್ಟ್ 11ರಂದು ಪುನೀತ್ ಕೆರೆಹಳ್ಳಿಯನ್ನು  ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು.

ಇದಾದ ಬಳಿಕ  ತನ್ನನ್ನು ಬಂಧಿಸಿರುವುದು ಅಕ್ರಮ ಎಂದು ಆರೋಪಿಸಿ ಪುನೀತ್ ಕೆರೆಹಳ್ಳಿ ಹೈಕೋರ್ಟ್ ಮೊರೆ ಹೋಗಿದ್ದರು. ಇದರ ವಿಚಾರಣೆಗೆ ಸರ್ಕಾರ ಸಲಹ ಸಮಿತಿ ರಚಿಸಿತ್ತು. ಈ ಬಗ್ಗೆ ಸಮಿತಿ ವಿಚಾರಣೆ ನಡೆಸಿದಾಗ ಪುನೀತ್ ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂಬ ವರದಿಯನ್ನು ಸಮಿತಿ ನೀಡಿತ್ತು. ಇದರನ್ವಯ ಕಮಿಷನರ್ ಆದೇಶವನ್ನು ರದ್ದುಪಡಿಸಿ ಪುನೀತ್ ಕೆರೆಹಳ್ಳಿಯನ್ನು ಬಂಧಮುಕ್ತಗೊಳಿಸಲಾಗಿದೆ.

ಇತ್ತೀಚಿನ ಸುದ್ದಿ