ಕಾವೇರಿ ಕಿಚ್ಚು: ತಲೆ ಕೆಳಗಾಗಿ ನಿಂತು ಚಳವಳಿ ನಡೆಸಿದ ಕನ್ನಡಪರ ಸಂಘಟನೆ

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಚಾಮರಾಜನಗರದಲ್ಲೂ ಪ್ರತಿಭಟನೆ ಕಿಚ್ಚು ಜೋರಾಗಿದ್ದು ಕನ್ನಡಪರ ಸಂಘಟನೆಗಳು ಇಂದು ಉಲ್ಟಾ ಚಳವಳಿ ನಡೆಸಿದ್ದಾರೆ.
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಇಂದು ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಈ ವೇಳೆ, ಹೋರಾಟಗಾರ ಶಾ.ಮುರುಳಿ ತಲೆ ಕೆಳಗಾಗಿ ನಿಂತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ ರೈತರಿಗೆ ದ್ರೋಹ ಬಗೆಯಲಾಗಿದೆ ಎಂದು ಕಿಡಿಕಾರಿದರು.ನಮ್ಮ ಜನರಿಗೆ ನೀರಿಲ್ಲ ಆದರೆ ತಮಿಳುನಾಡಿಗೆ ನೀರು ಹರಿಸಿ ಜನರ ಬದುಕನ್ನೇ ಸರ್ಕಾರ ಉಲ್ಟಾ ಮಾಡುತ್ತಿದೆ. ತಮಿಳುನಾಡಿಗೆ ನಿರಂತರವಾಗಿ ನೀರು ಬಿಡುತ್ತಿದ್ದರು
ಕರ್ನಾಟಕದ ಸಂಸದರು, ರಾಜ್ಯದಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯರು ಮೌನವಾಗಿದ್ದು ಇವರೆಲ್ಲರೂ ಕೂಡಲೇ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕೆಂದು ಕಿಡಿಕಾರಿದರು.
ಕಾವೇರಿ ನಿರ್ವಹಣಾ ಮಂಡಳಿ ಮಲತಾಯಿ ಧೋರಣೆ ಅನುಸರಿಸುತ್ತಿದೆ, ರಾಜ್ಯ ಸರ್ಕಾರ ತಕ್ಷಣವೇ ನೀರು ನಿಲ್ಲಿಸಿ ರಾಜ್ಯದ ಜನರ ಹಿತ ಕಾಪಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.