ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ ನಡೆಸಿ ಪ್ರತಿಭಟಿಸಿದ ಕನ್ನಡ ಪರ ಸಂಘಟನೆಗಳು - Mahanayaka

ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ ನಡೆಸಿ ಪ್ರತಿಭಟಿಸಿದ ಕನ್ನಡ ಪರ ಸಂಘಟನೆಗಳು

kannada sangattane
23/09/2023

ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವುದನ್ನು ಖಂಡಿಸಿ ಇಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಉರುಳುಸೇವೆ ನಡೆಸಿ ಆಕ್ರೋಶ ಹೊರಹಾಕಿದರು.

ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಭುವನೇಶ್ವರಿ ವೃತ್ತದಲ್ಲಿ ಚಾ.ರಂ.ಶ್ರೀನಿವಾಸಗೌಡ, ಶಾ.ಮುರುಳಿ ಹಾಗೂ ಇನ್ನಿತರರು ಅರೆ ಬೆತ್ತಲೆಯಾಗಿ ರಸ್ತೆಯಲ್ಲಿ ಉರುಳು ಸೇವೆ ಮಾಡಿ ಧಿಕ್ಕಾರದ ಘೋಷಣೆ ಕೂಗಿದರು.

ಕಾವೇರಿ ನ್ಯಾಯಾಧೀಕರಣ ತಮಿಳುನಾಡಿನ ಪರವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದೆ, ರಾಜ್ಯ ಸರ್ಕಾರ ರೈತರ ಹಿತ ಬಲಿ ಕೊಡುತ್ತಿದೆ, ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸದೇ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೋರಾಟಗಾರರು ಆಕ್ರೋಶ ಹೊರಹಾಕಿದರು.

ಇನ್ನು, ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ ಮಾಡಿದ್ದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.

ಇತ್ತೀಚಿನ ಸುದ್ದಿ