ದಿಲ್ಲಿಯಲ್ಲಿ ಫೆಲೆಸ್ತೀನ್ ಮೇಲಿನ ಇಸ್ರೇಲ್ ದಾಳಿ ಖಂಡಿಸಿ ಎಸ್‌ಎಫ್ಐ ಪ್ರತಿಭಟನೆ

24/10/2023
ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಖಂಡಿಸಿ ದೆಹಲಿಯ ಇಸ್ರೇಲಿ ರಾಯಭಾರ ಕಚೇರಿ ಬಳಿ ವಿದ್ಯಾರ್ಥಿ ಸಂಘಟನೆಯಾದ ಎಸ್‌ಎಫ್ಐ ಪ್ರತಿಭಟನೆ ನಡೆಸಿತು.
ಇದೇ ವೇಳೆ ಫೆಲೆಸ್ತೀನ್ ಪರ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರನ್ನು ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿ ಪೊಲೀಸರು ಬಂಧಿಸಿದ ಘಟನೆ ಕೂಡಾ ನಡೆಯಿತು.
ಇನ್ನು ಪ್ರತಿಭಟನಾನಿರತರನ್ನು ಪೊಲೀಸರು ಎಳೆದುಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದ್ದು, ಪ್ರತಿಭಟನಾಕಾರರು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫೆಲೆಸ್ತೀನ್ ಪರ ಭಾರತದ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಇಸ್ರೇಲ್ ಧ್ವಜಗಳನ್ನು ಸುಟ್ಟು ಹಾಕಿ ಆಕ್ರೋಶ ಹರಿಸಿದ ಘಟನೆ ಕೂಡಾ ನಡೆಯಿತು.
ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ರಾಕೆಟ್ ದಾಳಿ ಮತ್ತು ಗಾಜಾ ಪಟ್ಟಿಯ ಮೇಲೆ ಇಸ್ರೇಲ್ನ ಪ್ರತಿದಾಳಿಯ ನಂತರ ಪ್ರಾರಂಭವಾದ ಇಸ್ರೇಲ್-ಹಮಾಸ್ ಯುದ್ಧವು ಗಾಝಾದಲ್ಲಿ 1,400 ಕ್ಕೂ ಹೆಚ್ಚು ಇಸ್ರೇಲಿಗಳು ಮತ್ತು 4,700 ಕ್ಕೂ ಹೆಚ್ಚು ಫೆಲೆಸ್ತೀನೀಯರನ್ನು ಕೊಂದಿದೆ