ಫೆಲೆಸ್ತೀನಿಯರ ಪರ ಅಮೆರಿಕದಲ್ಲಿ ಭಾರೀ ಪ್ರತಿಭಟನೆ

ಫೆಲೆಸ್ತೀನಿಯರ ಪರ ಅಮೆರಿಕದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಈ ಕಾರಣದಿಂದಾಗಿ ಅಮೆರಿಕಾದ ಅತ್ಯಂತ ಬ್ಯುಸಿ ರಸ್ತೆಗಳಾದ ಇಲ್ಲಿನೋಯ್ಸ್ ಕ್ಯಾಲಿಫೋರ್ನಿಯ ನ್ಯೂಯಾರ್ಕ್ ಮತ್ತು ಇತರ ಪ್ರಮುಖ ರಸ್ತೆಗಳ ವಾಹನ ಸಂಚಾರ ಸ್ತಬ್ಧಗೊಂಡಿದೆ.
ಚಿಕಾಗೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗುವ ರಸ್ತೆಯನ್ನು ಪ್ರತಿಭಟನಾಕಾರರು ತಡೆದಿದ್ದಾರೆ. ಈ ನೆಲೆಯಲ್ಲಿ ಅನೇಕ ಜನರನ್ನು ಪೊಲೀಸರು ಬಂಧಿಸಿದ್ದಾರೆ ಇದೇ ವೇಳೆ ಕ್ಯಾಲಿಫೋರ್ನಿಯಾದಲ್ಲಿಯೂ ಇದೇ ಸಂದರ್ಭದಲ್ಲಿ ಪ್ರತಿಭಟನೆ ನಡೆದಿದ್ದು ಅನೇಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಟಾಪ್ ದಿ ವರ್ಲ್ಡ್ ಫಾರ್ ಗಾಜಾ ಎಂಬ ಹೆಸರಲ್ಲಿ ಬ್ಯಾನರ್ ಅನ್ನು ಹಿಡಿದುಕೊಂಡಿದ್ದ ಪ್ರತಿಭಟನಾಕಾರರು ಕ್ಯಾಲಿಫೋರ್ನಿಯಾದ ಗೋಲ್ಡನ್ ಗೇಟ್ ಬ್ರಿಡ್ಜ್ ನ ಎರಡು ಬದಿಯನ್ನು ಮುಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth