ಇಸ್ರೇಲ್ ನಲ್ಲಿ ಟ್ರಂಪ್ ಭಾಷಣದ ನಡುವೆ ಪ್ಯಾಲೆಸ್ಟೈನ್ ಪರ ಘೋಷಣೆ!

palestine
13/10/2025

ಜೆರುಸಲೆಮ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್ ಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅಚ್ಚರಿಯ ಘಟನೆಯೊಂದು ನಡೆದಿದ್ದು, ಟ್ರಂಪ್ ಭಾಷಣದ ವೇಳೆ ಕೆಲವು ಸಂಸದರು ಪ್ಯಾಲೆಸ್ಟೈನ್ ಪರ ಘೋಷಣೆ ಕೂಗಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್‌ ನಲ್ಲಿ ಅಮೆರಿಕದ ಮಧ್ಯಸ್ಥಿಕೆಯ ಕದನ ವಿರಾಮ ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವಿನ ಒತ್ತೆಯಾಳು ಒಪ್ಪಂದವನ್ನು ಆಚರಿಸಲು ಇಸ್ರೇಲ್ ಗೆ ಆಗಮಿಸಿದ್ದು, ಈ ವೇಳೆ ಇಸ್ರೇಲ್ ನ ಎಲ್ಲ ಜನಪ್ರತಿನಿಧಿಗಳು ಎದ್ದುನಿಂತು ಚಪ್ಪಾಳೆ ತಟ್ಟಿ ಸ್ವಾಗತಿಸಿದರು.

ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಟ್ರಂಪ್ ಅವರನ್ನು ಸ್ವಾಗತಿಸಿದರು. ಇಸ್ರೇಲ್ ಸೇನಾಪಡೆಗಳು ಮಿಲಿಟರಿ ಬ್ಯಾಂಡ್ ನುಡಿಸಿ ಸ್ವಾಗತ ಕೋರಿತು.

ಬಳಿಕ ಇಸ್ರೇಲ್ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಟ್ರಂಪ್ ಭಾಷಣ ಆರಂಭಿಸಿದರು. ಇಸ್ರೇಲ್ ಮತ್ತು ಗಾಜಾದ ಹಮಾಸ್ ಬಂಡುಕೋರರ ನಡುವಿನ ಸುದೀರ್ಘ 2 ವರ್ಷಗಳ ಯುದ್ಧಕ್ಕೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಇಸ್ರೇಲ್‌ ಸಂಸತ್ತನ್ನು ಉದ್ದೇಶಿಸಿ ಟ್ರಂಪ್‌ ಭಾಷಣ ಮಾಡುತ್ತಿದ್ದರು.

ಈ ವೇಳೆ ಗಾಜಾ ಕದನ ವಿರಾಮದಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಟ್ರಂಪ್ ಅರಬ್ ಮತ್ತು ಮುಸ್ಲಿಂ ರಾಷ್ಟ್ರಗಳಿಗೆ ಟ್ರಂಪ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅಲ್ಲದೆ ಒತ್ತೆಯಾಳುಗಳು ಹಿಂತಿರುಗಿದ್ದಾರೆ, ಅದನ್ನು ಹೇಳಲು ನನಗೆ ತುಂಬಾ ಸಂತೋಷವಾಗುತ್ತದೆ ಎಂದರು.

ಸಂಸದರಾದ ಐಮನ್ ಒಡೆಹ್ ಮತ್ತು ಓಫರ್ ಕ್ಯಾಸಿಫ್ ಹೀಬ್ರೂ ಭಾಷೆಯಲ್ಲಿ ಘೋಷಣೆ ಕೂಗಿದರು. ಇವರಿಬ್ಬರು ಪ್ಯಾಲೆಸ್ಟೈನ್ ರಾಷ್ಟ್ರದ ಮಾನ್ಯತೆಗಾಗಿ ಕರೆ ನೀಡುವ ಫಲಕಗಳನ್ನು ಪ್ರದರ್ಶಿಸಿದರು. ಹೀಗಾಗಿ ಮುಜುಗರ ತಪ್ಪಿಸಲು ತಕ್ಷಣವೇ ಭದ್ರತಾ ಸಿಬ್ಬಂದಿ ಇಬ್ಬರು ಸಂಸದರನ್ನು ಸಂಸತ್ ನಿಂದ ಹೊರಗೆ ಕರೆದುಕೊಂಡು ಹೋದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version