ಹುಟ್ಟು ಹಬ್ಬದ ಪ್ರಯುಕ್ತ ಅಂಬೇಡ್ಕರ್ ಮತ್ತು ಬರಹಗಳ 24 ಸಂಪುಟಗಳನ್ನು ದೇಣಿಗೆ ನೀಡಿದ ಪ್ರೊ.ಮಂಜುನಾಥ್ ಬಾಳ - Mahanayaka

ಹುಟ್ಟು ಹಬ್ಬದ ಪ್ರಯುಕ್ತ ಅಂಬೇಡ್ಕರ್ ಮತ್ತು ಬರಹಗಳ 24 ಸಂಪುಟಗಳನ್ನು ದೇಣಿಗೆ ನೀಡಿದ ಪ್ರೊ.ಮಂಜುನಾಥ್ ಬಾಳ

Ambedkar book
26/07/2023


Provided by

ಬಾಗಲಕೋಟೆ: ಜಿಲ್ಲೆಯ ಮುಧೋಳ ನಗರದ ಎಸ್ ಆರ್ ಕಂಠಿ ಪದವಿ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾಗಿರುವ ಪ್ರೊ ಮಂಜುನಾಥ್ ಬಾಳ ನಾಯಕರವರು ಅವರ ಹುಟ್ಟು ಹಬ್ಬದ ಪ್ರಯುಕ್ತ ಇಂದು ಮಹಾವಿದ್ಯಾಲಯದ ಗ್ರಂಥಾಲಯಕ್ಕೆ ಅಂಬೇಡ್ಕರ್ ಮತ್ತು ಬರಹಗಳ 24 ಸಂಪುಟಗಳನ್ನು ದೇಣಿಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಚಾರ್ಯರಾದ ಪ್ರೊ. ಬಿ.ಆರ್.ಪಾಟೀಲರವರು ಅಂಬೇಡ್ಕರ್ ಅವರ ಬರಹಗಳು ಮತ್ತು ಭಾಷಣಗಳ 24 ಸಂಪುಟ ಗಳಲ್ಲಿ ಅಂಬೇಡ್ಕರ್ ಅವರ ಇಡೀ ಸಾಹಿತ್ಯ ಬರಹವನ್ನು ಕಾಣಬಹುದಾಗಿದ್ದು ಸಂಪುಟಗಳನ್ನು ಓದುವುದರ ಮೂಲಕ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಅಂಬೇಡ್ಕರ್ ಅವರ ಇನ್ನಷ್ಟು ವಿಚಾರಗಳನ್ನು ತಿಳಿದು ಕೊಳ್ಳಲು ಸಹಕಾರಿಯಾದ   ವಾತಾವರಣ ಇಂದು ಸೃಷ್ಟಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಈ ಕಾರ್ಯಕ್ರಮದಲ್ಲಿ ಗ್ರಂಥಪಾಲಕರಾದ ಪ್ರೊ ಚಿರಂಜೀವಿ ಹಾಗೂ ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ