ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ವಿಚಾರ: ಪ್ರತಿನಿಧಿ ಕಾಯ್ದೆಯಡಿ ಭ್ರಷ್ಟಾಚಾರಕ್ಕೆ ಕಾರಣವಾಗುವುದಿಲ್ಲ ಎಂದ ಸುಪ್ರೀಂ ಕೋರ್ಟ್‌

28/05/2024

ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಕಟಿಸುವ ಭರವಸೆ ಜನರಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗಬಹುದೇ ವಿನಹ ಜನ ಪ್ರತಿನಿಧಿ ಕಾಯ್ದೆಯಡಿ ಭ್ರಷ್ಟಾಚಾರಕ್ಕೆ ಕಾರಣವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ವೇಳೆ ಕಾಂಗ್ರೆಸ್‌ ನೀಡಿದ್ದ ಭರವಸೆಗಳ ಕುರಿತು ಕುರಿತು ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಬಿ.ಝಡ್‌ ಝಮೀರ್‌ ಅಹ್ಮದ್ ಖಾನ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ಕೆವಿ ವಿಶ್ವನಾಥನ್‌ ಅವರಿದ್ದ ಪೀಠ, “ಪ್ರಣಾಳಿಕೆಯಲ್ಲಿ ರಾಜಕೀಯ ಪಕ್ಷಗಳು ನೀಡುವ ಭರವಸೆಗಳು ಭ್ರಷ್ಟ ವ್ಯವಹಾರಕ್ಕೆ ಸಮವಲ್ಲ” ಎಂದು ಹೇಳಿದ್ದು, ಮೇಲ್ಮನವಿಯನ್ನು ವಜಾಗೊಳಿಸಿದೆ.

“ಕಾಂಗ್ರೆಸ್‌ನ ಐದು ಗ್ಯಾರಂಟಿಗಳನ್ನು ಸಮಾಜ ಕಲ್ಯಾಣ ನೀತಿಗಳೆಂದು ಪರಿಗಣಿಸಬೇಕು. ಅವು ಆರ್ಥಿಕವಾಗಿ ಕಾರ್ಯ ಸಾಧುವೇ ಅಥವಾ ಇಲ್ಲವೇ ಎಂಬುವುದು ಬೇರೆ ವಿಚಾರ. ಭರವಸೆಗಳ ಜಾರಿಯಿಂದ ರಾಜ್ಯದ ಬೊಕ್ಕಸ ಹೇಗೆ ಬರಿದಾಗುತ್ತದೆ? ಅದು ಅಸಮರ್ಪಕ ಆಡಳಿತಕ್ಕೆ ಹೇಗೆ ಕಾರಣವಾಗುತ್ತದೆ? ಎಂಬುವುದನ್ನು ಉಳಿದ ಪಕ್ಷದವರು ತೋರಿಸಬೇಕು. ಪ್ರಕರಣದ ನಿರ್ದಿಷ್ಟ ಸಂದರ್ಭ ಸನ್ನಿವೇಶಗಳ ಅಡಿಯಲ್ಲಿ ಅವುಗಳನ್ನು ತಪ್ಪು ನೀತಿ ಎಂದು ಕರೆಯಬಹುದು. ಆದರೆ, ಭ್ರಷ್ಟ ನಡೆ ಎನ್ನಲಾಗದು” ಎಂದು ಹೈಕೋರ್ಟ್ ಹೇಳಿತ್ತು. ಇದನ್ನು ಪ್ರಶ್ನಿಸಿ ದೂರುದಾರರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version