ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್?: ಇಂದು ನಿರ್ಧಾರ ಪ್ರಕಟ ಸಾಧ್ಯತೆ

thawarchand gehlot
05/08/2024

ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ರಾಜ್ಯಪಾಲರಿಂದ ಮಹತ್ವದ ನಿರ್ಧಾರ ಪ್ರಕಟ ಸಾಧ್ಯತೆ ಇದೆ.

ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ (Thawarchand Gehlot) ಅವರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ವಿರುದ್ಧ ತೆಗೆದುಕೊಳ್ಳಬಹುದಾದ ಮುಂದಿನ ಕ್ರಮದ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ.

ಮುಡಾ ಅಕ್ರಮ ನಿವೇಶನ ಹಂಚಿಕೆ ಆರೋಪದ ಪ್ರಕರಣದಲ್ಲಿ ಮುಖ್ಯಮಂತ್ರಿ ಅವರಿಗೆ ಜು.26ರಂದು ಶೋಕಾಸ್ ನೋಟಿಸ್ ನೀಡಿದ್ದರು. ಇದಾದ ಬಳಿಕ ರಾಜ್ಯಪಾಲರು ದೆಹಲಿ ಪ್ರವಾಸ ಕೈಗೊಂಡಿದ್ದರು. ಇಂದು ಸೋಮವಾರ ಮಧ್ಯಾಹ್ನದ ವೇಳೆಗೆ ರಾಜ್ಯಕ್ಕೆ ವಾಪಸ್ಸಾಗಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್(Prosecution) ವಿಚಾರವಾಗಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ  ಎನ್ನುವುದನ್ನು ಕಾದು ನೋಡಬೇಕಿದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡಲ್ಲ ಅನ್ನುವ ವಿಶ್ವಾಸ ಇದೆ. ಕೊಟ್ಟರೂ ಅದನ್ನು ಕಾನೂನು ಪ್ರಕಾರ ಎದುರಿಸ್ತೇವೆ. ರಾಜ್ಯಪಾಲರು ಏನೇ ನಿರ್ಧಾರ ಕೈಗೊಂಡ್ರೂ ನಾವು ಎದುರಿಸ್ತೇವೆ. ಕಾನೂನು ಹೋರಾಟ ಮಾಡುತ್ತೇವೆ ಎಂದು ಈ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್(Dr.G.Parameshwar) ಹೇಳಿಕೆ ನೀಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version