ವೇಶ್ಯಾವಾಟಿಕೆ ದಂಧೆ: ಮೂವರು ಆರೋಪಿಗಳು ಅರೆಸ್ಟ್! - Mahanayaka
1:26 PM Wednesday 29 - October 2025

ವೇಶ್ಯಾವಾಟಿಕೆ ದಂಧೆ: ಮೂವರು ಆರೋಪಿಗಳು ಅರೆಸ್ಟ್!

arrest
03/02/2024

ಮಣಿಪಾಲ: ವೇಶ್ಯಾವಾಟಿಕೆ ದಂಧೆಗೆ ಸಂಬಂಧಿಸಿದಂತೆ ಮೂವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ  ನಡೆದಿದೆ.

ಫೆ.1ರಂದು ವ್ಯಕ್ತಿ ಮಹಿಳೆಯರನ್ನು ಪುಸಲಾಯಿಸಿ ಕರೆತಂದು ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ  ಸ್ಥಳಕ್ಕೆ  ದಾಖಲಿ ನಡೆಸಿದ ಮಣಿಪಾಲ ಪೊಲೀಸರು ಆರೋಪಿ ಪವನ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೊಲೀಸರ ವಿಚಾರಣೆ ವೇಳೆ ಆರೋಪಿ ನೀಡಿದ ಮಾಹಿತಿಯನ್ನಾಧರಿಸಿ, ಉಡುಪಿ ತಾಲೂಕಿನ ಬೊಮ್ಮರಬೆಟ್ಟು ಮನೆಗೆ ದಾಳಿ ನಡೆಸಿ, ಮತ್ತಿಬ್ಬರು ಆರೋಪಿಗಳಾದ ಚೇತನ್ ಸಿ.ಬಿ. ಹಾಗೂ ಪಂಜು ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಘಟನೆ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ