ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ವಿರುದ್ಧ ಉಡುಪಿಯಲ್ಲಿ ಪ್ರತಿಭಟನೆ!
ಉಡುಪಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಮಾಡಿರುವ ವೈಯಕ್ತಿಕ ನಿಂದನೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಡಿ.17 ಶನಿವಾರ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ದೇಶದ ಸುರಕ್ಷತೆ ಹಾಗೂ ಶಾಂತಿಗೆ ಭಂಗವನ್ನುಂಟುಮಾಡುವ ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ನ ದೇಶ ವಿರೋಧಿ ನೀತಿ ಮತ್ತು ಸದಾ ಭಯೋತ್ಪಾದಕರನ್ನು ಪೋಷಿಸುತ್ತಿರುವ ಉಗ್ರರ ತವರೂರು ಪಾಕಿಸ್ತಾನದ ಅವಿವೇಕಿತನದ ಪರಮಾವಧಿಯನ್ನು ತೀವ್ರವಾಗಿ ಖಂಡಿಸಿದರು.
ದೇಶ ವಿರೋಧಿ ಕಾಂಗ್ರೆಸ್ ಮತ್ತು ಭಯೋತ್ಪಾದಕ ರಾಷ್ಟ್ರ ಪಾಕ್ ವಿರುದ್ಧ ಘೋಷಣೆ ಮೊಳಗಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಗೀತಾಂಜಲಿ ಎಮ್. ಸುವರ್ಣ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಸದಾನಂದ ಬಳ್ಕೂರು, ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್, ಮಾಲತಿ ನಾಯ್ಕ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಜಿಲ್ಲಾ ಅಲ್ಪಸಂಖ್ಯಾಕ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷೆ ವೀಣಾ ನಾಯ್ಕ್, ಕುಂದಾಪುರ ಮಂಡಲಾಧ್ಯಕ್ಷ ಶಂಕರ ಅಂಕದಕಟ್ಟೆ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ಬೈಂದೂರು, ಮಂಜುನಾಥ್ ಮಣಿಪಾಲ್, ಸಚಿನ್ ಪೂಜಾರಿ, ಮೋರ್ಚಾ ಪ್ರ.ಕಾರ್ಯದರ್ಶಿಗಳಾದ ಗೋಪಾಲ್ ಕಾಂಚನ್, ಆಸಿಫ್ ಕಟಪಾಡಿ, ಜಿಲ್ಲಾ ಮತ್ತು ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಪ್ರಕೋಷ್ಠಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ನಗರಸಭಾ ಸದಸ್ಯರು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw