ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ

ಕಳೆದ ಹಲವು ದಿನಗಳಿಂದ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಕಾಮಗಾರಿಯಿಂದಾಗಿ ಜನ ಕಂಗಾಲಾಗಿದ್ದಾರೆ.
ಇದಕ್ಕೆ ಸಂಬಂಧಪಟ್ಟವರು ಇನ್ನಾದರೂ ಸೂಕ್ತ ಕ್ರಮ ಕೈಗೊಂಡು ಇಲ್ಲಿನ ಸಾರ್ವಜನಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಿ ಎಂದು ಕೂಳೂರಿನಲ್ಲಿ ನಾಗರಿಕ ಹಿತರಕ್ಷಣಾ ಸಮಿತಿಯು ಬೃಹತ್ ಪ್ರತಿಭಟನೆ ನಡೆಸಿತು.
ರಸ್ತೆ ದುರವಸ್ಥೆಯಿಂದಾಗಿ ಸ್ಥಳೀಯ ನಾಗರಿಕರಿಗೆ, ವ್ಯಾಪಾರಸ್ಥರಿಗೆ, ವಾಹನ ಚಾಲಕರಿಗೆ ಮುಖ್ಯವಾಗಿ ಆಂಬುಲೆನ್ಸ್ ಗಳಿಗೆ, ಶಾಲಾ ಮಕ್ಕಳ ಬಸ್ಸಿಗೆ, ಕಂಪನಿಗಳಿಗೆ, ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ಎಲ್ಲಾ ವರ್ಗದವರಿಗೂ ತೊಂದರೆ ಉಂಟಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕೊಡಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw