ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ತಿರುಗಿ ಬಿದ್ದು ಜೀಪನ್ನು ಬೆನ್ನಟ್ಟಿದ ಸಾರ್ವಜನಿಕರು! - Mahanayaka

ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ತಿರುಗಿ ಬಿದ್ದು ಜೀಪನ್ನು ಬೆನ್ನಟ್ಟಿದ ಸಾರ್ವಜನಿಕರು!

mudigere mla mp kumaraswamy
20/11/2022

ಕೊಟ್ಟಿಗೆಹಾರ (Exclusive): ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯ ಮೃತದೇಹವನ್ನು ಇಟ್ಟು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವಿಕೋಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.

ಬೆಳಗ್ಗೆ 7:30ರ ವೇಳೆಗೆ ಮಹಿಳೆಯು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಆದರೆ, ಸಂಜೆ 6 ಗಂಟೆಯ ವೇಳೆಗೆ ಸ್ಥಳೀಯ ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಸ್ಥಳಕ್ಕೆ ತೆರಳಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಕಾಡಾನೆ ತುಳಿತದಿಂದ ಒಂದು ಅಮಾಯಕ ಜೀವ ಬಲಿಯಾಗಿದೆ. ಬೆಳಗ್ಗೆ ಘಟನೆ ನಡೆದರೂ ನೀವು ಬಂದಿರೋದು ಸಂಜೆ 6 ಗಂಟೆಗೆ, ಈ ನಿರ್ಲಕ್ಷ್ಯ ಸರಿಯೇ? ಎಂದು ಪ್ರಶ್ನಿಸಿದ್ದಾರೆ.

ಇದೇ ವೇಳೆ ಗ್ರಾಮಸ್ಥರು ಹಾಗೂ ಕುಮಾರಸ್ವಾಮಿ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ರೊಚ್ಚಿಗೆದ್ದ ಜನರು  ಶಾಸಕರನ್ನು ತರಾಟೆಗೆತ್ತಿಕೊಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿರುವುದನ್ನು ಕಂಡ ಪೊಲೀಸರು, ಶಾಸಕರನ್ನು ಜೀಪಿನಲ್ಲಿ ಕೂರಿಸಿದ್ದಾರೆ. ಈ ವೇಳೆ ಮತ್ತಷ್ಟು ಆಕ್ರೋಶಗೊಂಡ ಗ್ರಾಮಸ್ಥರು ಜೀಪನ್ನು ಬೆನ್ನಟ್ಟಲು ಆರಂಭಿಸಿದ್ದಾರೆ. ಸಾರ್ವಜನಿಕರನ್ನು ನಿಯಂತ್ರಿಸಲು ಹರಸಾಹಸ ಪಟ್ಟ ಪೊಲೀಸರು ಕೊನೆಗೆ ಲಾಠಿ ಚಾರ್ಜ್ ಮಾಡಿ ಗುಂಪನ್ನು ಚದುರಿಸಿದ್ದಾರೆ.

ರಾಜ್ಯ ಸರ್ಕಾರದ ತೀವ್ರ ನಿರ್ಲಕ್ಷ್ಯದಿಂದಾಗಿ ಕಾಡಂಚಿನ ಜನರು ಕಾಡು ಪ್ರಾಣಿಗಳ ದಾಳಿಗೆ ಒಳಗಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇತ್ತ ಸ್ವ ಕ್ಷೇತ್ರದಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದರೂ ಎಂ.ಪಿ.ಕುಮಾರಸ್ವಾಮಿ ಅವರು ಸಂಜೆಯ ವೇಳೆಗೆ ಆರಾಮವಾಗಿ ಬರುತ್ತಾರೆ. ಈ ಎಲ್ಲ ನಿರ್ಲಕ್ಷ್ಯಗಳು ಸಾರ್ವಜನಿಕರನ್ನು ರೊಚ್ಚಿಗೆಬ್ಬಿಸಿತ್ತು.

ವಿಡಿಯೋ:

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ