ಊಟದಲ್ಲಿ ಹುಳು ಪತ್ತೆಯಾಗಿದ್ದನ್ನ ಪ್ರಶ್ನಿಸಿದ್ದಕ್ಕೆ ಹಲ್ಲೆ: ವಸತಿ ಶಾಲೆಯ ಪ್ರಿನ್ಸಿಪಾಲ್, ವಾರ್ಡನ್ ವಿರುದ್ಧ ಪ್ರತಿಭಟನೆ
ಬೀದರ್: ಊಟದಲ್ಲಿ ಹುಳು ಪತ್ತೆಯಾಗಿರೋದನ್ನ ಪ್ರಶ್ನೆ ಮಾಡಿದ್ದಕ್ಕೆ ವಿದ್ಯಾರ್ಥಿಗಳಿಗೆ ಥಳಿಸಿರುವ ಘಟನೆ ಔರಾದ್ ತಾಲೂಕಿನ ಸಂತಪೂರ್ ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ನಿತ್ಯ ಕಳಪೆ ಆಹಾರ ಪೂರೈಸುತ್ತಿರುವುದನ್ನ ವಿದ್ಯಾರ್ಥಿಗಳು ಪ್ರಶ್ನೆ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಮೊರಾರ್ಜಿ ವಸತಿ ಶಾಲೆಯ ವಾರ್ಡನ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಿನ್ಸಿಪಾಲ್ ಭಗವಂತ್ ಕಾಂಬಳೆ ಹಾಗೂ ವಾರ್ಡನ್ ಶಿವಕುಮಾರ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಧಿಕ್ಕಾರ ಕೂಗಿದ್ದಾರೆ. ಪ್ರಶ್ನೆ ಮಾಡಿದ ವಿದ್ಯಾರ್ಥಿಗಳಿಗೆ ವಾರ್ಡನ್ ಅಮಾನವೀಯವಾಗಿ ಥಳಿಸಿದ್ದಾನೆ. ಕೈಗೆ, ಬೆನ್ನಿಗೆ ಹಾಸ್ಟೇಲ್ ಮೇಲ್ವಿಚಾರಕ ಥಳಿಸಿದ್ದಾನೆ ಎಂದು ವಿದ್ಯಾರ್ಥಿಗಳು ಕಣ್ಣೀರು ಹಾಕುತ್ತಾ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: