ಟೋಲ್ ಗೇಟ್ ತೆರವಿಗೆ ಕರೆ ಹಿನ್ನೆಲೆ: ಸ್ಥಳದಲ್ಲಿ 400ಕ್ಕೂ ಹೆಚ್ಚು ಪೊಲೀಸರ ಸರ್ಪಗಾವಲು - Mahanayaka
12:31 PM Friday 5 - September 2025

ಟೋಲ್ ಗೇಟ್ ತೆರವಿಗೆ ಕರೆ ಹಿನ್ನೆಲೆ: ಸ್ಥಳದಲ್ಲಿ 400ಕ್ಕೂ ಹೆಚ್ಚು ಪೊಲೀಸರ ಸರ್ಪಗಾವಲು

police
18/10/2022


Provided by

ಸುರತ್ಕಲ್ ಎನ್ ಐಟಿಕೆ ಟೋಲ್ ಗೇಟ್ ತೆರವು ಕಾರ್ಯಾಚರಣೆಗೆ ಸಮಾನ ಮನಸ್ಕ ಸಂಘಟನೆಗಳು ಇಂದು‌ ನಿರ್ಧಾರ ‌ಮಾಡಿದ್ದು ಸ್ಥಳದಲ್ಲಿ ಪೊಲೀಸ್ ಸರ್ಪಗಾವಲು ಏರ್ಪಡಿಸಲಾಗಿದೆ.

ಅಲ್ಲದೇ ಪ್ರತಿಭಟನೆಯನ್ನು ತಡೆಯಲು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಾಗೂ ಜಿಲ್ಲೆಯ ಹೆಚ್ಚುವರಿ ಪೊಲೀಸರನ್ನು ನಿನ್ನೆ ಸಂಜೆಯಿಂದ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ.

ಮಂಗಳೂರು ಕಮಿಷನರೇಟ್ ವಿಭಾಗದ ಡಿಸಿಪಿ ಅನ್ನು ಕುಮಾರ್ ಸ್ಥಳಕ್ಕಾಗಮಿಸಿ ಪೊಲೀಸ್ ಕಾರ್ಯಾಚರಣೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಪಣಂಬೂರು ಎಸಿಪಿ ಮಹೇಶ್ ಕುಮಾರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ತಂಡವನ್ನು ರಚಿಸಲಾಗಿದೆ. ಸುಮಾರು 400ಕ್ಕೂ ಹೆಚ್ಚು ಪೊಲೀಸರನ್ನು ಸನ್ನದ ಸ್ಥಿತಿಯಲ್ಲಿರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ