ಕಾವೇರಿ ಕಿಚ್ಚು: ಕನ್ನಡಪರ ಹೋರಾಟಗಾರರಿಂದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ - Mahanayaka
3:02 PM Thursday 12 - September 2024

ಕಾವೇರಿ ಕಿಚ್ಚು: ಕನ್ನಡಪರ ಹೋರಾಟಗಾರರಿಂದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ

prathibattane
03/10/2023

ಚಾಮರಾಜನಗರ: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಚಾಮರಾಜನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಅವರಣದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಬೈಕ್ ನಲ್ಲಿ ಹೊರಟು ರೈಲ್ವೆ ನಿಲ್ದಾಣಕ್ಕೆ ತೆರಳಿ ಕೆಲಕಾಲ. ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ, ಕರ್ನಾಟಕ ಸರ್ಕಾರ, ಸಂಸದರ ವಿರುದ್ದ ದಿಕ್ಕಾರ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕಾವೇರಿ ನೀರು‌ ಹಂಚಿಕೆಯಲ್ಲಿ ಕಾವೇರಿ ನ್ಯಾಯಾಧೀಕರಣ ಕರ್ನಾಟಕ ಪಾಲಿಗ ಮರಣಶಾಸನ ಬರೆದಿದ್ದು ಅನ್ಯಾಯ ಮಾಡಿದೆ. ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ನಿಜಗುಣರಾಜು ಇದ್ದರು.


Provided by

ಇತ್ತೀಚಿನ ಸುದ್ದಿ