ಚಾಮರಾಜನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ - Mahanayaka

ಚಾಮರಾಜನಗರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

bjp
04/08/2023


Provided by

ಚಾಮರಾಜನಗರ: ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ, ಎಸ್ ಟಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವುದರ ವಿರುದ್ಧ ಚಾಮರಾಜನಗರದಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು.

ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಚ್.ಸಿ.ಮಹದೇವಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಬಿಜೆಪಿ ಕಾರ್ಯಕರ್ತರು ಧರಣಿ ನಡೆಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎನ್.ಮಹೇಶ್, ಸಿ.ಎಸ್.ನಿರಂಜನ್ ಕುಮಾರ್ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಸೇರಿ ಅನೇಕರು ಭಾಗಿಯಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ