1:33 AM Saturday 13 - September 2025

ನಾವು ಇಲ್ಲೇ ಹುಟ್ಟಿದ್ದೇವೆ, ಇಲ್ಲೇ ಸಾಯುತ್ತೇವೆ: ಬಾಂಗ್ಲಾದೇಶದಲ್ಲಿ ಹಿಂದೂಗಳಿಂದ ಪ್ರತಿಭಟನೆ

bangaldesh
10/08/2024

ಢಾಕಾ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯ ಬಳಿಕ ಶೇಖ್ ಹಸೀನಾ ದೇಶಬಿಟ್ಟು ಪರಾರಿಯಾಗಿದ್ದರು. ಆದರೆ ಇನ್ನೂ ಕೂಡ ದೇಶದ ಪರಿಸ್ಥಿತಿ ಸುಧಾರಿಸಿಲ್ಲ.

ಬಾಂಗ್ಲಾದೇಶದಲ್ಲಿ ನಿರಂತರವಾಗಿ ಹಿಂದೂಗಳನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇದೀಗ ಬಾಂಗ್ಲಾದೇಶ ಹಿಂದೂ ಜಾಗರಣ ಮಂಚ್ ಇಂತಹ ಕೃತ್ಯಗಳನ್ನು ವಿರೋಧಿಸಿ ಪ್ರತಿಭಟನೆ ಆರಂಭಿಸಿದೆ. ಶುಕ್ರವಾರ ರಾಜಧಾನಿ ಢಾಕಾದ ಶಹಬಾಗ್ ನಲ್ಲಿ ಸಾವಿರಾರು ಹಿಂದೂಗಳು ಜಮಾಯಿಸಿ ಹಿಂಸಾಚಾರದ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಹಿಂದೂಗಳಿಗೆ ಅಲ್ಪಸಂಖ್ಯಾತರ ಸಚಿವಾಲಯವನ್ನು ಸ್ಥಾಪಿಸುವುದು, ಅಲ್ಪಸಂಖ್ಯಾತರ ರಕ್ಷಣಾ ಆಯೋಗ ರಚನೆ, ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ತಡೆಯಲು ಕಠಿಣ ಕಾನೂನುಗಳು ಮತ್ತು ಅಲ್ಪಸಂಖ್ಯಾತರಿಗೆ 10% ನಷ್ಟು ಸಂಸದೀಯ ಸ್ಥಾನಗಳನ್ನು ಹಂಚಿಕೆ ಮಾಡಬೇಕು ಎನ್ನುವ ಒತ್ತಾಯ ಮಾಡಲಾಗಿದೆ.

ರಾಷ್ಟ್ರೀಯ ಪ್ರೆಸ್ ಕ್ಲಬ್ ಎದುರು ಪ್ರತಿಭಟಿಸಿದ ಹಿಂದೂಗಳು, ನಾವು ಈ ದೇಶದಲ್ಲಿ ಹುಟ್ಟಿದ್ದೇವೆ, ಇಲ್ಲೇ ಸಾಯುತ್ತೇವೆ. ಈ ದೇಶ ಎಲ್ಲರಿಗೂ ಸೇರಿದ್ದು ಎಂದರು.
ಇದು ನಮ್ಮ ಪೂರ್ವಜರ ಜನ್ಮಸ್ಥಳವೂ ಹೌದು. ನಾವು ಇಲ್ಲಿಗೆ ಹಾರಿ ಬಂದಿಲ್ಲ, ಇದು ಯಾರ ತಂದೆಯ ದೇಶವೂ ಅಲ್ಲ. ಮುಂದೆ ನಾನು ಸತ್ತರೂ ನನ್ನ ಜನ್ಮಸ್ಥಳವನ್ನು ಬಿಡುವುದಿಲ್ಲ ಎಂದು ಹೇಳಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version