ಮಹಾಲಯ ಅಮಾವಾಸ್ಯೆ ದಿನದಂದು ಕಾವೇರಿ ಕಾವು ನೀರು, ಹೂ ಬಿಟ್ಟು ಪ್ರತಿಭಟನೆ - Mahanayaka

ಮಹಾಲಯ ಅಮಾವಾಸ್ಯೆ ದಿನದಂದು ಕಾವೇರಿ ಕಾವು ನೀರು, ಹೂ ಬಿಟ್ಟು ಪ್ರತಿಭಟನೆ

chamarajanagara
14/10/2023


Provided by

ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ನೀರು, ಹೂ ಬಿಡುವ ಮೂಲಕ  ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ  ಕರ್ನಾಟಕ ಸೇನಾಪಡೆಯ ಅಧ್ಯಕ್ಷ  ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು, ಹೂ ಬಿಟ್ಟು ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ  ಚಾ.ರಂ..ಶ್ರೀನಿವಾಸಗೌಡ  ಮಾತನಾಡಿ,  ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ ಇಂದಿಗೆ 31 ದಿನಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು.  ಇಂದು ಪಿತೃಪಕ್ಷದ ನಿಮಿತ್ತ  ನೀರು, ಹೂ ಬಿಟ್ಟು ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ  ಚೆನ್ನಾಗಿರಲಿ ಎಂದರು.

ಕರ್ನಾಟಕ ಸರ್ಕಾರ  ತಮಿಳುನಾಡಿಗೆ ಬಿಟ್ಟಿರುವ ನೀರನ್ನು‌ನಿಲ್ಲಿಸಬೇಕು ಇಲ್ಲದಿದ್ದರೆ   ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ  ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್,   ನಿಜಧ್ವನಿಗೋವಿಂದರಾಜು,  ಗು.ಪುರುಷೋತ್ತಮ್, ರವಿಚಂದ್ರಪ್ರಸಾದ್ ಕಹಳೆ, ಲಿಂಗರಾಜು, ನಂಜುಂಡಸ್ವಾಮಿ, ಲೋಕೇಶ್  ಇತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ