4:45 PM Saturday 25 - October 2025

ವಿಕೋಪಕ್ಕೆ ತಿರುಗಿದ ವಿದ್ಯುತ್ ಇಲಾಖೆ ವಿರುದ್ಧ ನಡೆದ ಪ್ರತಿಭಟನೆ: ಓರ್ವ ಅಮಾಯಕ‌‌ ಬಲಿ

26/07/2023

ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ವಿದ್ಯುತ್ ಇಲಾಖೆ ವಿರುದ್ಧ ನಡೆದ ಪ್ರತಿಭಟನೆ ವಿಕೋಪಕ್ಕೆ ತಿರುಗಿತು. ಪರಿಣಾಮ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿ ವಿದ್ಯುತ್ ಇಲಾಖೆಯ ಕಚೇರಿಯನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ವಿದ್ಯುತ್ ಕಡಿತದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ ಎಂದು ಜಿಲ್ಲಾ ಎಸ್‌ಪಿ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಿಪಕ್ಷಗಳು ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ರಾಜ್ಯ ಸರ್ಕಾರ ಪ್ರತಿಯೊಂದು ಅಂಶದಲ್ಲೂ ವಿಫಲವಾಗಿದೆ ಎಂದು ಹೇಳಿದೆ.

‘ಬಿಹಾರ ಸರ್ಕಾರವು ಪ್ರತಿಯೊಂದು ಅಂಶದಲ್ಲೂ ವಿಫಲವಾಗಿದೆ. ವಿದ್ಯುತ್ ಕಡಿತದ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದ, ಜನರ ಮೇಲೆ ಪೊಲೀಸರು ಗುಂಡು ಹಾರಿಸಿ, ಒಬ್ಬ ವ್ಯಕ್ತಿಯ ಸಾವಿಗೆ ಕಾರಣವಾಗಿದ್ದಾರೆ” ಎಂದು ಮಾಜಿ ಡಿಸಿಎಂ ತಾರ್‌ಕಿಶೋರ್ ಪ್ರಸಾದ್ ಹೇಳಿದರು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಈ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಕತಿಹಾರ್‌ನ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version