ಬಿಜೆಪಿ ಸರ್ಕಾರದ ರೈತಪರ ಯೋಜನೆಗಳನ್ನು ಕಾಂಗ್ರೆಸ್ ರದ್ದುಪಡಿಸಿದರೆ ಪ್ರತಿಭಟನೆ: ಮಲ್ಲಿಕಾರ್ಜುನ ಎಚ್ಚರಿಕೆ

ಚಾಮರಾಜನಗರ: ಬಿಜೆಪಿ ಸರ್ಕಾರದ ರೈತಪರ ಯೋಜನೆಗಳನ್ನು ಕಾಂಗ್ರೆಸ್ ರದ್ದುಪಡಿಸಿದರೆ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ರೈತಮೋರ್ಚಾದ ಜಿಲ್ಲಾಧ್ಯಕ್ಷ ಎಸ್.ಎಂ. ಮಲ್ಲಿಕಾರ್ಜುನ ಎಚ್ಚರಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿರುವ ರೈತಪರ ಯೋಜನೆಗಳಾದ ಎಪಿಎಂಸಿ ಕಾನೂನು ರದ್ದು, ವಿದ್ಯುತ್ ದರ ಏರಿಕೆ, ರೈತ ವಿದ್ಯಾನಿಧಿ ಯೋಜನೆ ರದ್ದು, ಜಿಲ್ಲೆಗೊಂದು ಗೋಶಾಲೆ ಯೋಜನೆ ರದ್ದು, ಭೂಸಿರಿಯೋಜನೆ ರದ್ದು, ಕಿಸಾನ್ ಸಮ್ಮಾನ್ ನಿಧಿಯೋಜನೆ ರದ್ದು, ರೈತ ಶಕ್ತಿ ಯೋಜನೆ ರದ್ದು, ನೀರಾವರಿ ಯೋಜನೆ ರದ್ದು, ನೀರಾವರಿ ಯೋಜನೆಗಳ ಕೃಷಿ ಭೂಮಿ ಮಾರಾಟ ಕಾಯ್ದೆ ರದ್ದು ಸೇರಿದಂತೆ ಇನ್ನೂ ಹಲವು ಯೋಜನೆಗಳನ್ನು ರದ್ದುಮಾಡಲು ಕಾಂಗ್ರೆಸ್ ಪಕ್ಷ ಮುಂದಾಗಿರುವುದನ್ನು ಖಂಡನೀಯವಾಗಿದೆ ಎಂದರು.
ಬಿಜೆಪಿ ಸರ್ಕಾರದ ಅನೇಕ ಜನಪರ ಯೋಜನೆಗಳು ಇಂದಿಗೂ ಜನರಿಗೆ ಅನುಕೂಲವಾಗಲಿದೆ ಅದರೆ ಕಾಂಗ್ರೆಸ್ ಸರ್ಕಾರ ರದ್ದು ಮಾಡುವ ಅನೇಕ ಯೋಜನೆಗಳಿಂದ ಜನರಿಗೆ ಅನ್ಯಾಯವಾಗಲಿದೆ. ಇದರ ವಿರುದ್ದ ಬೀದಿಗಿಳಿದು ಹೋರಾಟ ಮಾಡುವುದಾಗಿ ಮಲ್ಲಿಕಾರ್ಜುನ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಮೋರ್ಚಾದ ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಸುಂದ್ರಪ್ಪ, ಕೃಷ್ಣಶೆಟ್ಟಿ ಶ್ಯಾಡ್ರಳ್ಳಿ, ನಾಗರಾಜಪ್ಪ, ತಾಲೂಕು ಅಧ್ಯಕ್ಷ ಕೃಷ್ಣಶೆಟ್ಟಿ ಹಾಜರಿದ್ದರು.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw