6:56 AM Wednesday 27 - August 2025

ಹಿಂಜಾವೇ ಮುಖಂಡ ಸತೀಶ್ ದಾವಣಗೆರೆ ಬಂಧನ ಖಂಡಿಸಿ ಉಡುಪಿಯಲ್ಲಿ ಪ್ರತಿಭಟನೆ

21/08/2023

ಹಿಂದೂ ಜಾಗರಣ ವೇದಿಕೆಯ ಮುಖಂಡ ಸತೀಶ್ ದಾವಣಗೆರೆ ಅವರ ಬಂಧನ ಖಂಡಿಸಿ ಉಡುಪಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಜ್ಜರಕಾಡು ಹುತಾತ್ಮರ ಸ್ಮಾರಕರದ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಹಿಂಜಾವೇ ಮುಖಂಡ ರಿಕೇಶ್ ಪಾಲನ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವ ರಾಜಕಾರಣ ಮಾಡುತ್ತಿದೆ. ಡಿಜೆ ಹಳ್ಳಿ ಕೆಜೆ ಹಳ್ಳಿಯ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಗಳನ್ನು ಹಿಂಪಡೆಯುವ ಕೆಲಸ ಮಾಡುತ್ತಿದೆ. ಆದ್ರೆ ಹಿಂದೂ ಕಾರ್ಯಕರ್ತರನ್ನು ಬಂಧಿಸುವುದು. ಅವರ ಮೇಲೆ ವಿನಾ ಕಾರಣ ಕೇಸ್ ದಾಖಲಿಸುವುದು. ಅಲ್ಲದೆ, ಸಂಘಟನೆಯ ಕೆಲಸಗಳಿಗೆ ತೊಂದರೆ ಮಾಡಲಾಗುತ್ತಿದೆ. ಆ ಮೂಲಕ ಸಿದ್ದರಾಮಯ್ಯ ಸರಕಾರ ಹಿಂದೂ ಕಾರ್ಯಕರ್ತರನ್ನು ದಮನಿಸುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೂ ಕಾರ್ಯಕರ್ತರ ಮೇಲೆ ಇದೇ ರೀತಿ ದೌರ್ಜನ್ಯ ಮುಂದುವರಿದೆ ಕಾಂಗ್ರೆಸ್ ಸರಕಾರದ ವಿರುದ್ಧ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ರು.

ಹಿಂಜಾವೇ ಮುಖಂಡರಾದ ಶ್ರೀಕಾಂತ್ ಶೆಟ್ಟಿ ಕಾರ್ಕಳ, ಗುರುಪ್ರಸಾದ್ ಸೂಡ, ಶಂಕರ್ ದೇವಾಡಿಗ ಕೋಟ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

Exit mobile version