ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ: ಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ವಿರುದ್ಧ ಪ್ರಕರಣ ದಾಖಲು
ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಉಡುಪಿ ಜಿಲ್ಲಾ ಘಟಕದಿಂದ ಗುರುವಾರ ಉಡುಪಿ ನಗರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ವಿಹಿಪಂ ಮುಖಂಡರಾದ ಶರಣ್ ಪಂಪ್ವೆಲ್ ಹಾಗೂ ದಿನೇಶ್ ಮೆಂಡನ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಹಿಂದೂ ತಾಯಂದಿರು ಎಚ್ಚರ ಆಗಬೇಕು. ಸೌಟು ಪೊರಕೆ ಹಿಡಿಯುವ ಕೈಯಲ್ಲಿ ಶಸ್ತ್ರಾಸ್ತ್ರ ಹಿಡಿಯಬೇಕು. ಅನ್ಯಾಯವಾದಾಗ ತಲವಾರು, ಕತ್ತಿ, ಹಿಡಿಯಲು ಸಿದ್ಧರಾಗಬೇಕು’ ಎಂದು ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಅದೇ ರೀತಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಹಿಂಪ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಕೂಡ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆಂದು ದೂರಲಾಗಿದೆ.
ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬಂದೋಬಸ್ತಿನಲ್ಲಿದ್ದ ಸ್ಥಳೀಯ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಇವರಿಬ್ಬರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























