ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ - Mahanayaka

ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್

kalladka prabhakar bhat
02/06/2025

ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಅಡಿಯಲ್ಲಿ RSS ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಮೇ 12 ರಂದು ಬಂಟ್ವಾಳದ ಕಾವಳಪಡೂರು ಮದ್ವ ಪ್ಯಾಲೇಸ್ ಹಾಲ್‌ ನಲ್ಲಿ ಬಜ್ಪೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಸಮಾಜದ ಸ್ವಾಸ್ತ್ಯ ಕೆಡುವಂತೆ, ಮತೀಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ ಎಸ್‌ 353(2) ಅಡಿಯಲ್ಲಿ ಪ್ರಭಾಕರ್ ಭಟ್ ವಿರುದ್ಧ ಕೇಸ್‌ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ