ಪ್ರಚೋದನಕಾರಿ ಭಾಷಣ: ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ ಐಆರ್ ದಾಖಲು
20/09/2026
ಮೈಸೂರು: ತಿ.ನರಸೀಪುರ ತಾಲೂಕಿನಲ್ಲಿ ನಡೆದ ಶೋಭಾಯಾತ್ರೆ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಅವರ ಸಹಚರರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸಾರ್ವಜನಿಕ ಸ್ಥಳದಲ್ಲಿ ಜಾತಿಗಳ ನಡುವೆ ದ್ವೇಷ ಮತ್ತು ಅಸೂಯೆ ಮೂಡಿಸುವ, ನೆಮ್ಮದಿ ಭಂಗ ತರುವ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ಈ ಪ್ರಕರಣ ದಾಖಲಾಗಿದೆ. ಬಿಎನ್ಎಸ್ ಕಾಯ್ದೆಯ 132, 191, 194, 196(1)(a)(b) ಮತ್ತು 190ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಈ ಕುರಿತು ಮಾಹಿತಿ ನೀಡಿದ್ದು, ಪ್ರಚೋದನಕಾರಿ ಭಾಷಣದ ಕಾರಣದಿಂದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಖಚಿತಪಡಿಸಿದ್ದಾರೆ.

























