3:32 PM Wednesday 27 - August 2025

ಪಿಎಸ್ ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆ ಮುಂದೂಡಿಕೆ

psi exam
12/09/2024

ಬೆಂಗಳೂರು: ಪಿಎಸ್ ಐ 402 ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಸೆ.28 ಶನಿವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದರು.

ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಮುಖ್ಯ ಪರೀಕ್ಷೆಗೆ ಮತ್ತು ಪಿಎಸ್ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ.

ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಬಿಜೆಪಿಯ ನಿಯೋಗವು ಮನವಿ ನೀಡಿತ್ತು. ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಡಿಸೆಂಬರ್ ವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ತಿಳಿಸಿದ್ದರು. ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ, ಶನಿವಾರದಂದು ಒಂದು ದಿನ ಪರೀಕ್ಷೆ ನಡೆಸಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದೆ. ಪರೀಕ್ಷೆ ನಡೆಸಲು ಶಿಕ್ಷಕರು ಬೇಕಾಗುತ್ತದೆ. ಎಲ್ಲ ಆಕಾಂಕ್ಷಿಗಳ ಮನವಿಗೆ ಮನ್ನಣೆ ಕೊಟ್ಟು, ಅನುಕೂಲವಾಗುವ ನಿಟ್ಟಿನಲ್ಲಿ ಸೆ.28ರಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಪೊಲೀಸ್ ಪೇದೆ ನೇಮಕಾತಿಗೆ ವಯೋಮಿತಿ ಹೆಚ್ಚಳದ ಕುರಿತು ಬೇರೆ ರಾಜ್ಯಗಳಿಂದ ಮಾಹಿತಿ ಕಲೆ ಹಾಕಿದ್ದೇವೆ. ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ, ವರದಿಯನ್ನು ಗಮನಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version