ಪಿಟಿಸಿಎಲ್ ಕಾಯ್ದೆ ತಿದ್ದುಪಡಿ ಹೋರಾಟ ಯಶಸ್ವಿ: ಅಹೋರಾತ್ರಿ ಹೋರಾಟ ಕೈಬಿಟ್ಟ ಪ್ರತಿಭಟನಾಕಾರರು
ಬೆಂಗಳೂರು: ಪಿಟಿಸಿಎಲ್ ಕಾಯ್ದೆ ತಿದ್ದುಪಡಿಗಾಗಿ 208 ದಿನಗಳಿಂದ ನಡೆಸುತ್ತಿದ್ದ ಎಸ್.ಸಿ, ಎಸ್.ಟಿ ಪಿಟಿಸಿಎಲ್ ಕಾಯ್ದೆ ಭೂಮಿ ವಂಚಿತರ ಹೋರಾಟಕ್ಕೆ ಕೊನೆಗೂ ಗೆಲುವು ದಕ್ಕಿದೆ. ಅಹೋರಾತ್ರಿ ಹೋರಾಟ ನಡೆಸುತ್ತಿರುವವರಿಗೆ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಆದೇಶ ಪತ್ರ ನೀಡಿದ ಹಿನ್ನೆಲೆಯಲ್ಲಿ ಹೋರಾಟಗಾರರು ಪ್ರತಿಭಟನೆ ಕೈಬಿಟ್ಟಿದ್ದಾರೆ.
ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾಕಾರರನ್ನು ಭೇಟಿಯಾದ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸರ್ಕಾರ ದಲಿತ ಸಮುದಾಯದ ಹಿತ ರಕ್ಷಣೆಗೆ ಬದ್ಧವಾಗಿದ್ದು, ವಿಶೇಷವಾಗಿ ಭೂಮಿ ರಕ್ಷಣೆಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ. ಮೊದಲ ಹಂತದಲ್ಲಿ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

PTCL ಕಾಯ್ದೆಗೆ ತಿದ್ದುಪಡಿ ಮಾಡಿ ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರಕ್ಕೆ ಅಭಿನಂದನೆಗಳನ್ನ ತಿಳಿಸಲಾಯಿತು. ಮತ್ತು ಅಹೋರಾತ್ರಿ ಧರಣಿ ಸತ್ಯಾಗ್ರಹದ ಹೋರಾಟದ ವಿಜಯೋತ್ಸವನ್ನು ಆಚರಿಸಿ ಹೋರಾಟವನ್ನು ಮುಕ್ತಾಯ ಗೊಳಿಸಲಾಯಿತು .
ಸರ್ಕಾರ ಕೊಟ್ಟ ಮಾತಿನಂತೆ ನುಡಿದಂತೆ ನಡೆದಿದೆ. ಶತಶತಮಾನಗಳಿಂದ ಶೋಷಣೆಗೆ ಒಳಗಾದವರಿಗೆ ಮರು ಬದುಕುಕಟ್ಟಿಕೊಳ್ಳಲು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದೆ. 2017 ರಲ್ಲಿ ಸರ್ವೋಚ್ಚ ನ್ಯಾಯಾಲಯ ನೆಕ್ಕಂಟಿರಾಮಲಕ್ಷ್ಮಿ ಹಾಗೂ ಕರ್ನಾಟಕ ಸರ್ಕಾರ ಪ್ರಕರಣದಲ್ಲಿ ನೀಡಿದ ತೀರ್ಪಿನಿಂದ ಲಕ್ಷಾಂತರ ಕುಟುಂಬಗಳ ಭೂಮಿ ಕೈ ತಪ್ಪಿದರಿಂದ ಇಡೀ ಸಮುದಾಯ ಭೂಮಿಗಳನ್ನು ಕಳೆದುಕೊಂಡು ಬೀದಿಪಾಲಾಗಿ ತಮ್ಮ ಜೀವನವೇ ಕಳೆದುಕೊಂಡಿದ್ದರು. 6 ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ. ಬಿಜೆಪಿ ಸುಳ್ಳು ಭರವಸೆಗಳನ್ನು ನೀಡಿ ಸಮುದಾಯವನ್ನು ದಾರಿ ತಪ್ಪಿಸಿತ್ತು ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಹಾ ಸಂಸ್ಥಾನ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ತಿಳಿಸಿದರು.
ಹೋರಾಟ ಸಮಿತಿ ಮುಖ್ಯಸ್ಥ ಮಂಜುನಾಥ್ ಮಾತನಾಡಿ, ಚಿತ್ರದುರ್ದಲ್ಲಿ ನಾವು ನೋರಾಟ ಆರಂಭಿಸಿದ ಸಂದರ್ಭದಲ್ಲಿ ವಿರೋದ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ ಶಿವಕುಮಾರ್, ಹೆಚ್.ಸಿ. ಮಹದೇವಪ್ಪ, ಸತೀಶ್ ಜಾರಕಿಹೋಳಿ ಹಲವು ಮುಖಂಡರು ನೀಡಿದ್ದ ಭರವಸೆ ಇದೀಗ ಈಡೇರಿದೆ. ಕಾಂಗ್ರೆಸ್ ಸರ್ಕಾರ ನಮಗೆ ಶಾಶ್ವತ ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ಒದಗಿಸಿದೆ ಎಂದರು.
ಈ ಕಾರ್ಯಕ್ರಮದಲ್ಲಿ ದಲಿತ ಸಂಘಟನೆಗಳ ಮುಖಂಡರುಗಳಾದ ರಾಮಣ್ಣ ಬಿ.ಎಂ. ವೆಂಕಟೇಶ್, ಹೆಣ್ಣೂರು ಶ್ರೀನಿವಾಸ್, ಬಿ. ಗೋಪಾಲ್, ಹರಿರಾಮ್, ಮೂರ್ತಿ ಭೀಮ್ ರಾವ್, ವೇಣುಗೋಪಾಲ್ ಮೌರ್ಯ, ಕವಿ ಕಡ್ಲ ಶಾಂತಕುಮಾರ್, ಚೆನ್ನಸ್ವಾಮಿ, ಈಶ್ವರ್ ಮುಂತಾದ ಗಣ್ಯರು ಭಾಗವಹಿಸಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























