ಲೇಡಿಸ್ ಹಾಸ್ಟೆಲ್ ನಲ್ಲಿ ಕುಡಿಯುವ ನೀರಿನ ವಿಚಾರಕ್ಕೆ ಪಿಯು ವಿದ್ಯಾರ್ಥಿನಿ ಮೇಲೆ ಹಲ್ಲೆ!

ರಾಯಚೂರು: ಲೇಡಿಸ್ ಹಾಸ್ಟೆಲ್ ನಲ್ಲಿ ಕುಡಿಯುವ ನೀರಿನ ವಿಚಾರವಾಗಿ ರಾಗಿಂಗ್ ನಡೆಸಿರುವ ಆರೋಪ ಕೇಳಿ ಬಂದಿದ್ದು, ಪಿಯು ವಿದ್ಯಾರ್ಥಿನಿಯನ್ನು ಸೀನಿಯರ್ ಗಳು ರೂಮ್ ನಲ್ಲಿ ಕೂಡಿ ಹಾಕಿ ಥಳಿಸಿರುವ ಗಂಭೀರ ಆರೋಪ ಕೇಳಿ ಬಂದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಇರುವ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ನಲ್ಲಿ ಈ ಘಟನೆ ನಡೆದಿದೆ.
BED ವಿಭಾಗದ ನಾಲ್ವರು ಸೀನಿಯರ್ ವಿದ್ಯಾರ್ಥಿಗಳು ವಿದ್ಯಾರ್ಥಿನಿಯೋರ್ವಳನ್ನು ರೂಮ್ ನಲ್ಲಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಕುಡಿಯುವ ನೀರಿನ ಬಕೆಟ್ ನಲ್ಲಿ ಸೀನಿಯರ್ಸ್ ಜಗ್ ಹಾಕಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.
ಗಾಯಾಳು ವಿದ್ಯಾರ್ಥಿನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth