ತ್ಯಾಜ್ಯ ಎಸೆದು ಪರಾರಿಯಾಗುತ್ತಿದ್ದವರನ್ನು ಹಿಡಿದ ಸಾರ್ವಜನಿಕರು, ಕೊಟ್ರು ಕೈ ತುಂಬಾ ಕೆಲಸ! - Mahanayaka
5:07 AM Wednesday 22 - October 2025

ತ್ಯಾಜ್ಯ ಎಸೆದು ಪರಾರಿಯಾಗುತ್ತಿದ್ದವರನ್ನು ಹಿಡಿದ ಸಾರ್ವಜನಿಕರು, ಕೊಟ್ರು ಕೈ ತುಂಬಾ ಕೆಲಸ!

kanyana
07/06/2023

ರಸ್ತೆ ಬದಿ ಬೇಕಾಬಿಟ್ಟಿ ತ್ಯಾಜ್ಯ ಎಸೆದವರನ್ನು  ಪತ್ತೆಹಚ್ಚಿ ಅವರಿಂದಲೇ ತ್ಯಾಜ್ಯವನ್ನು ಶುಚಿಗೊಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಳ್ನಾಡು ಎಂಬಲ್ಲಿ ನಡೆದಿದೆ.

ವಿಟ್ಲ ಕೊಳ್ನಾಡು ಗ್ರಾಮದ ಕಳೆಂಜಿಮಲೆ ರಕ್ಷಿತಾರಣ್ಯ ಮೂಲಕ ಹಾದು ಹೋಗುವ ಕನ್ಯಾನ ಸಂಪರ್ಕ ರಸ್ತೆ ಸುತ್ತಮುತ್ತಲಿನ ಪ್ರದೇಶ ತ್ಯಾಜ್ಯದಿಂದ ದುರ್ನಾತ ಬೀರುತ್ತಿತ್ತು. ತ್ಯಾಜ್ಯ ಎಸೆಯುವವರನ್ನು ಪತ್ತೆಹಚ್ಚಲು ಸ್ಥಳೀಯರು ಕಾಯುತ್ತಿದ್ದರು.  ಗೂಡ್ಸ್ ಟೆಂಪೋದಲ್ಲಿ ಬಂದ ಇಬ್ಬರು ದುರ್ನಾತ ಬರುತ್ತಿದ್ದ ತ್ಯಾಜ್ಯಗಳ ಮೂಟೆಗಳನ್ನು ರಸ್ತೆ ಬದಿ ಎಸೆದು ಎಸ್ಕೇಪ್ ಆಗುತ್ತಿದ್ದಂತೆ ಸ್ಥಳೀಯರೋಬ್ಬರು ಮೊಬೈಲ್ ಮೂಲಕ ಚಿತ್ರೀಕರಿಸಿದ್ದರು.

ವೀಡಿಯೋ ಹರಿದಾಡುತ್ತಿದ್ದಂತೆ ತ್ಯಾಜ್ಯ ಎಸೆದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿದ ಪ್ರಕೃತಿ ಪ್ರೇಮಿ ಯುವಕರು ಅರಣ್ಯ ಇಲಾಖೆಗೂ ಮಾಹಿತಿ ನೀಡಿದರು. ಸ್ಥಳೀಯ ಯುವಕರು ತ್ಯಾಜ್ಯ ಎಸೆದವರನ್ನು ಸ್ಥಳಕ್ಕೆ ಕರೆಯಿಸಿ ಅವರಿಂದಲೇ ತ್ಯಾಜ್ಯಗಳ ಮೂಟೆಗಳನ್ನು ಪುನಹ ಟೆಂಪೋಗೆ ತುಂಬಿಸಿ ರಕ್ಷಿತಾರಣ್ಯ ಪರಿಸರವನ್ನು ಶುಚಿಗೊಳಿಸಿದ್ದಾರೆ. ಪ್ರಕೃತಿ ಪ್ರೇಮಿಗಳ ಕಾರ್ಯಾಚರಣೆಗೆ ಅರಣ್ಯ ಸಿಬ್ಬಂದಿಗಳು ಸಾಥ್ ನೀಡಿದ್ದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ