2:43 PM Wednesday 29 - October 2025

ಗೋರಕ್ಷಣೆ ನೆಪದಲ್ಲಿ ವ್ಯಕ್ತಿಯ ಹತ್ಯೆ?: ಹಿಂದೂತ್ವ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಬಂಧನ

puneeth kerehalli
02/04/2023

ರಾಮನಗರ:  ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು  ಸಾತನೂರು ಪೊಲೀಸರು  ಬಂಧಿಸಿರುವುದು ತಿಳಿದು ಬಂದಿದೆ. ಸಾತನೂರು ಸಮೀಪ ಜಾನುವಾರುಗಳನ್ನು ರಕ್ಷಣೆ ಮಾಡುವ ವೇಳೆ ಇರ್ದಿಷ್ ಪಾಷಾ ಎಂಬಾತ ಸಾವನ್ನಪ್ಪಿದ್ದನು. ಇರ್ದಿಷ್ ಮೇಲೆ ಹಲ್ಲೆಗೈದು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಈ ಸಂಬಂಧ ಇರ್ದಿಷ್ ಕುಟುಂಬಸ್ಥರು ಸಾತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರು ದಾಖಲಿಸಿಕೊಂಡಿರುವ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಸದ್ಯ ಸಾತನೂರು ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ರಹಸ್ಯ ಸ್ಥಳದಲ್ಲಿರಿಸಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಕೊಲೆ ಆರೋಪ ಹಿನ್ನೆಲೆ ಮೃತನ ಸಂಬಂಧಿಕರು ಸಾತನೂರು ಠಾಣೆ ಬಳಿ ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಸಾತನೂರು ಬಳಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ 16 ಜಾನುವಾರುಗಳನ್ನ ರಕ್ಷಿಸಲಾಗಿದೆ.

ಈ ವೇಳೆ ಕ್ಯಾಂಟರ್ ವಾಹನದಲ್ಲಿದ್ದ ಇರ್ದಿಷ್ ಪಾಷ ಎಂಬಾತ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಜಾನುವಾರುಗಳನ್ನು ರಕ್ಷಿಸಿದ ಅನತಿ ದೂರದಲ್ಲಿಯೇ ಇರ್ದಿಷ್ ಶವ ಪತ್ತೆಯಾಗಿತ್ತು.

ಪುನೀತ್ ಕೆರೆಹಳ್ಳಿ ವಿರುದ್ಧ ಕೊಲೆ ಆರೋಪ :

ಈ ಸಂಬಂಧ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಂಡದಿಂದ ದಾಳಿ ನಡೆದಿದೆ ಎಂದು ಮೃತನ ಕುಟುಂಬಸ್ಥರು ಪುನೀತ್ ಕೆರೆಹಳ್ಳಿ ವಿರುದ್ಧ ಆರೋಪಿಸಿದ್ದಾರೆ. ಶನಿವಾರ ಸಾತನೂರು ಪೊಲೀಸರು ಠಾಣೆ ಮುಂದೆ ಇರ್ದಿಷ್ ಕುಟುಂಬಸ್ಥರು ಪ್ರತಿಭಟನೆ ಸಹ ನಡೆಸಿದ್ದರು.

ಕೆಲವು ತಿಂಗಳ ಹಿಂದೆ ನಟ ಸಾರ್ವಭೌಮ ಡಾ. ರಾಜ್‌ಕುಮಾರ್​ ಫ್ಯಾಮಿಲಿ ಬಗ್ಗೆ ಕೆಟ್ಟದಾಗಿ ಮಾತಾಡಿದ್ದ ಆರೋಪದ ಮೇರೆಗೆ ಪುನೀತ್​ ಕೆರೆಹಳ್ಳಿಗೆ ಕನ್ನಡಪರ ಹೋರಾಟಗಾರರು ಧರ್ಮದೇಟು ನೀಡಿದ್ದರು. ಈ ವಿಡಿಯೋ ಈಗ ಮೊಬೈಲ್ ​ನಲ್ಲಿ ಸೆರೆಯಾಗಿತ್ತು.ವರದಿಗಳ ಪ್ರಕಾರ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು,  ರಾಜ್ ಕುಮಾರ್ ಫ್ಯಾಮಿಲಿ ಬಗ್ಗೆ ಹಗುರವಾಗಿ ಮಾತನಾಡಿದ್ದೀಯಾ? ನೀನು ಕ್ಷಮೆ ಕೇಳಬೇಕು ಎಂದು ತಂಡ ಅವಾಜ್ ಹಾಕಿದ ಬಳಿಕ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿತ್ತು. ಅಲ್ಲದೇ ಈ ಹಿಂದೆ ಟಿಪ್ಪು ಫ್ಲೆಕ್ಸ್ ಹರಿದ ಪ್ರಕರಣ ಸೇರಿದಂತೆ ಹಲವು ಆರೋಪ ದೂರುಗಳು ಈತನ ಮೇಲಿದೆ. ಧರ್ಮದ ಹೆಸರಿನಲ್ಲಿ ಅನಗತ್ಯ ಹೋರಾಟಗಳನ್ನು ನಡೆಸುವ ಮೂಲಕ ಧರ್ಮ ಧರ್ಮಗಳ ನಡುವೆ ಸಾಮರಸ್ಯ ಕದಡುವ ಆರೋಪ ಕೂಡ ಈತನ ಮೇಲಿದೆ. ಸದಾ ವಿವಾದಕ್ಕೆ ಕಾರಣವಾಗುತ್ತಿರುವ ಪುನೀತ್ ಕೆರೆಹಳ್ಳಿ ಹೆಸರು ಇದೀಗ ಗಂಭೀರ ಪ್ರಕರಣವೊಂದರಲ್ಲಿ ಕೇಳಿ ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version