ಬಿಜೆಪಿ ನಿಯೋಗದಿಂದ ಪುನೀತ್ ಕೆರೆಹಳ್ಳಿ ಆರೋಗ್ಯ ವಿಚಾರಣೆ

06/10/2023
ಬೆಂಗಳೂರು: ತಮ್ಮ ಮೇಲಿನ ಆರೋಪಗಳ ಕುರಿತ ದಾಖಲೆ ನೀಡಲು ರಾಜ್ಯದ ಕಾಂಗ್ರೆಸ್ ಸರಕಾರವನ್ನು ಆಗ್ರಹಿಸಿ ಆಸ್ಪತ್ರೆಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಇಂದು ಬಿಜೆಪಿ ನಿಯೋಗವು ಭೇಟಿ ಮಾಡಿ ಆರೋಗ್ಯ ವಿಚಾರಿಸಿತು. ಅಲ್ಲದೆ ಅವರಿಗೆ ಧೈರ್ಯ ತುಂಬಿತು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯದ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಶಾಸಕಿ ಭಾಗೀರಥಿ ಮುರುಳ್ಯ, ನಿವೃತ್ತ ಪೊಲೀಸ್ ಅಧಿಕಾರಿ ಮತ್ತು ಚಾಮರಾಜಪೇಟೆ ಬಿಜೆಪಿ ಮುಖಂಡ ಭಾಸ್ಕರ್ ರಾವ್ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.