2:06 PM Saturday 31 - January 2026

ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಮೇಲೆ ಗುಂಪಿನಿಂದ ಹಲ್ಲೆ!

puneeth kerehalli
23/12/2022

ಬೆಂಗಳೂರು: ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ರಾಜ್ ಕುಮಾರ್ ಕುಟುಂಬದ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿರುವ ಆರೋಪ ಹೊರಿಸಿ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವರದಿಗಳ ಪ್ರಕಾರ ಚಾಮರಾಜಪೇಟೆಯಲ್ಲಿ ಈ ಘಟನೆ ನಡೆದಿದ್ದು,  ರಾಜ್ ಕುಮಾರ್ ಫ್ಯಾಮಿಲಿ ಬಗ್ಗೆ ಹಗುರವಾಗಿ ಮಾತನಾಡಿದ್ದೀಯಾ? ನೀನು ಕ್ಷಮೆ ಕೇಳಬೇಕು ಎಂದು ತಂಡ ಅವಾಜ್ ಹಾಕಿದ ಬಳಿಕ ಪುನೀತ್ ಕೆರೆಹಳ್ಳಿ ಮೇಲೆ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ.

ಶಿವಕುಮಾರ್ ನಾಯ್ಕ್ ಬಣ ಹಲ್ಲೆ ನಡೆಸಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಘಟನೆಗೂ ಮುನ್ನ ಪುನೀತ್ ಕೆರೆಹಳ್ಳಿಗೆ ಕರೆ ಮಾಡಿ ಕ್ಷಮೆ ಕೇಳುವಂತೆ ಹೇಳಲಾಗಿತ್ತು. ಆದರೆ, ಈ ವೇಳೆ ಕ್ಷಮೆ ಕೇಳಲು ನಿರಾಕರಿಸಿದ ಪುನೀತ್ ನಾನು ಚಾಮರಾಜಪೇಟೆಯಲ್ಲೇ ಇದ್ದೇನೆ, ಬರೋದಾದ್ರೆ ಬನ್ನಿ ಎಂದು ಅವಾಜ್ ಹಾಕಿದ್ದಾರೆ ಎನ್ನಲಾಗಿದೆ. ಹಲ್ಲೆ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version