ಅಪ್ಪು ನಿಧನವಾದ ಬೆನ್ನಲ್ಲೇ ಚಾಮರಾಜನಗರದಲ್ಲಿ ಸ್ವಯಂ ಪ್ರೇರಿತ ಬಂದ್! - Mahanayaka
6:45 AM Wednesday 20 - August 2025

ಅಪ್ಪು ನಿಧನವಾದ ಬೆನ್ನಲ್ಲೇ ಚಾಮರಾಜನಗರದಲ್ಲಿ ಸ್ವಯಂ ಪ್ರೇರಿತ ಬಂದ್!

puneeth rajkumar
30/10/2021


Provided by

ಚಾಮರಾಜನಗರ: ಕನ್ನಡ ಚಿತ್ರರಂಗದ ಅಮೂಲ್ಯ ರತ್ನ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ  ಚಾಮರಾಜನಗರದಲ್ಲಿ ಜನರು ತಮ್ಮ ಅಂಗಡಿ ಮುಂಗಟ್ಟುಗಳನ್ನು ತೆರೆಯದೇ ಸ್ವಯಂ ಪ್ರೇರಿತರಾಗಿ ಬಂದ್ ನಡೆಸಿ, ತಮ್ಮ ಮೆಚ್ಚಿನ ನಟನಿಗೆ ಗೌರವ ನೀಡಿದ್ದಾರೆ.

ಇನ್ನೂ ನಗರದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ ಪೋಸ್ಟರ್ ಗಳನ್ನು ಹಾಕಲಾಗಿದೆ. ಅಪ್ಪು ಅಭಿಮಾನಿಗಳು ಅವರ ಭಾವಚಿತ್ರವನ್ನು ಹಿಡಿದುಕೊಂಡು ಬೈಕ್ ಗಳಲ್ಲಿ ತೆರಳಿ ವಿಶೇಷವಾದ ಶ್ರದ್ಧಾಂಜಲಿಯನ್ನು ಅರ್ಪಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಅವರು ನಿನ್ನೆ ಜಿಮ್ ಸಂದರ್ಭದಲ್ಲಿ ಅಸ್ವಸ್ಥರಾಗಿ ಹೃದಯಾಘಾತದಿಂದ ನಿಧನರಾಗಿದ್ದರು. ಪುನೀತ್ ಅವರ ನಿಧನಕ್ಕೆ ದೇಶಾದ್ಯಂತ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ