ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ! - Mahanayaka
12:38 PM Wednesday 28 - January 2026

ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ!

puneeth rajkumar
29/10/2021

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು,  ಸದ್ಯ ಸ್ಥಳದಲ್ಲಿ ಸ್ವಚ್ಛತಾ ಕಾರ್ಯಗಳನ್ನು ಅಧಿಕಾರಿಗಳ ಉಪಸ್ಥಿತಿಯಲ್ಲಿ ನಡೆಸಲಾಗುತ್ತಿದೆ.

ಹೊರಾಂಗಣ ಕ್ರೀಡಾಂಗಣದಲ್ಲಿ ಪೆಂಡಾಲ್ ಹಾಕಲಾಗುತ್ತಿದ್ದು, ಸ್ವಚ್ಛತಾ ಕಾರ್ಮಿಕರು ಸ್ಥಳದಲ್ಲಿ ಬಿರುಸಿನ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.  ಭಾರೀ ಸಂಖ್ಯೆಯಲ್ಲಿ ಜನ ಸೇರುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕೂಡ ಸಾಕಷ್ಟು ಸಿದ್ಧತೆ ನಡೆಸುತ್ತಿದೆ.

ಇನ್ನೂ ಅಭಿಮಾನಿಗಳನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯುವ ಸಲುವಾಗಿ ಕ್ರೀಡಾಂಗಣದ ಸುತ್ತಲೂ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ