ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಭರ್ಜರಿ 2,700 ಹುದ್ದೆಗಳು : ಬೇಗನೆ ಅರ್ಜಿ ಸಲ್ಲಿಸಿ - Mahanayaka

ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಭರ್ಜರಿ 2,700 ಹುದ್ದೆಗಳು : ಬೇಗನೆ ಅರ್ಜಿ ಸಲ್ಲಿಸಿ

punjab national bank
10/07/2024

Punjab National Bank 2700 Vacancies –  ಭಾರತ ದೇಶದಲ್ಲಿಯೇ ಹೆಸರುವಾಸಿಯಾಗಿರುವಂತಹ ರಾಷ್ಟ್ರೀಕೃತ ಬ್ಯಾಂಕ್ ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2700 ಹುದ್ದೆಗಳು ಖಾಲಿ ಇವೆ.


Provided by

ಈ ಹುದ್ದೆಗಳನ್ನು ನೇಮಕಾತಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಬೇಕಾಗಿರುವ ಅರ್ಹತೆಗಳ ಮಾಹಿತಿ, ಅರ್ಜಿ ಸಲ್ಲಿಸುವ ಮಾಹಿತಿ ಹಾಗೂ ಇತರೆ ಅವಶ್ಯಕ ಮಾಹಿತಿಯನ್ನು ಕೆಳಗಿನ ಭಾಗದಲ್ಲಿ ವಿವರಿಸಲಾಗಿದೆ.

Punjab National Bank Recruitment 2024 – ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ ಖಾಲಿ ಇರುವ ಈ ಹುದ್ದೆಗಳಲ್ಲಿ ಒಟ್ಟು 32 ಹುದ್ದೆಗಳನ್ನು ಕರ್ನಾಟಕ ರಾಜ್ಯದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ

ನೇಮಕಾತಿ ಅರ್ಜಿ ಸಲ್ಲಿಕೆಗೆ ಅರ್ಹತೆಗಳು :

ನೀವು ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವುದಾದರೆ ನೀವು ಅಂಗಿ ಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 15 ಸಾವಿರ ರೂಪಾಯಿಯವರೆಗೆ ಸ್ಟೈಪೆಂಡ್ ನೀಡಲಾಗುತ್ತದೆ.

ಅರ್ಜಿ ಶುಲ್ಕ :

* ಜನರಲ್ ಕ್ಯಾಟಗರಿ ಹಾಗೂ ಒಬಿಸಿ ಕೆಟಗರಿಯಲ್ಲಿ ಬರುವ ಅಭ್ಯರ್ಥಿಗಳು ಈ ನೇಮಕಾತಿಗೆ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಲು 800 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

* ಎಲ್ಲಾ ವರ್ಗದ ಮಹಿಳಾ ಅಭ್ಯರ್ಥಿಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದ ಅಭ್ಯರ್ಥಿಗಳು 600 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

* ಅಂಗವಿಕಲ ವರ್ಗದ ಅಡಿಯಲ್ಲಿ ಬರುವ ಅಭ್ಯರ್ಥಿಗಳು 400 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ನೇಮಕಾತಿಯ ಪ್ರಮುಖ ದಿನಾಂಕಗಳ ಮಾಹಿತಿ:

* ಈ ನೇಮಕಾತಿಗೆ ನೊಂದಣಿ ಮಾಡಿಕೊಳ್ಳಲು ಈಗಾಗಲೇ ಆರಂಭವಾಗಿದೆ.

* ನೊಂದಣಿಗಾಗಿ ನಿಗದಿಪಡಿಸಿದ ಕೊನೆಯ ದಿನಾಂಕ ಜುಲೈ 13, 2024

ಅರ್ಜಿ ಸಲ್ಲಿಸುವವರು ಈ ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಲಿಂಕ್ : https://bfsissc.com/apprentice_form.php


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ