ಪಂಜಾಬ್ ರಾಜಕೀಯದಲ್ಲಿ ಬಿಜೆಪಿ ಮಹತ್ತರ ಪಾತ್ರ: ಅಮಿತ್ ಶಾ ಹೇಳಿಕೆ

amith shah
05/06/2022

ಚಂಡೀಗಡ: ಪಂಜಾಬ್ ರಾಜಕೀಯದಲ್ಲಿ ಬಿಜೆಪಿ ಮಹತ್ತರ ಪಾತ್ರ ವಹಿಸಲಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ.

ಬಿಜೆಪಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮೊಂದಿಗೆ ಕೈಜೋಡಿಸಲು ಬಯಸುವವರನ್ನು ಸ್ವಾಗತಿಸುತ್ತಿದ್ದೇವೆ ಎಂದು ಹೇಳಿದರು.

ಬಿಜೆಪಿ ಸ್ವಂತ ಬಲದಿಂದ ಚುನಾವಣೆ ಎದುರಿಸಲಿದೆ. ಅಲ್ಲದೆ ಗೆಲುವು ಸಾಧಿಸಿ ರಾಜ್ಯಕ್ಕೆ ಏಳಿಗೆಯನ್ನು ತರಲಿದ್ದೇವೆ ಎಂದು ಹೇಳಿದರು. ಧರ್ಮ ಹಾಗೂ ಜನರ ಹಕ್ಕುಗಳ ರಕ್ಷಣೆಗಾಗಿ ಪಂಜಾಬಿನ ಜನರ ತ್ಯಾಗ, ಬಲಿದಾನವನ್ನು ಅಮಿತ್ ಶಾ ಸ್ಮರಿಸಿದರು.

ಕೇಂದ್ರ ಹಾಗೂ ಇಡೀ ದೇಶವು ಪಂಜಾಬ್ ಜನರೊಂದಿಗೆ ಇದ್ದೇವೆ ಎಂದು ಹೇಳಲು ಬಯಸುತ್ತೇನೆ. ಈ ಬಿಕ್ಕಟ್ಟಿನ ಪರಿಸ್ಥಿತಿ ಇನ್ನಷ್ಟು ಹದಗೆಡಿಸಲು ಬಿಡುವುದಿಲ್ಲ ಎಂದು ನಾನು ಪಂಜಾಬ್ ಜನರಿಗೆ ಭರವಸೆ ನೀಡಲು ಬಯಸುತ್ತೇನೆ ಎಂದು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗಂಡು ಮಗುವಿಗೆ ಜನ್ಮ ನೀಡಲಿಲ್ಲ ಎಂದು ನಡು ರಸ್ತೆಯಲ್ಲೇ ತಾಯಿಗೆ ಮಾರಣಾಂತಿಕ ಹಲ್ಲೆ!

ಪಿಎಸ್ ​ಐ ಅಭ್ಯರ್ಥಿ ಮೇಲೆ ಹೆಚ್ ಡಿಕೆ ಗನ್ ಮ್ಯಾನ್ ಹಲ್ಲೆ ಆರೋಪ!

ಸಾವಿನಲ್ಲೂ ಕರ್ತವ್ಯ ಪ್ರಜ್ಞೆ ಮೆರೆದ ಬಸ್ ಚಾಲಕ

ರಾಜ್ಯಾದ್ಯಂತ ಚಡ್ಡಿ ಸುಡುವ ಅಭಿಯಾನ  ಶುರು ಮಾಡ್ತೇವೆ: ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Exit mobile version