ಮಹಿಳೆಯ ಅರೆಬೆತ್ತಲೆ ಮೆರವಣಿಗೆ: ಅತ್ತೆ-ಮಾವ ಸೇರಿ ಮೂವರ ಬಂಧನ - Mahanayaka

ಮಹಿಳೆಯ ಅರೆಬೆತ್ತಲೆ ಮೆರವಣಿಗೆ: ಅತ್ತೆ-ಮಾವ ಸೇರಿ ಮೂವರ ಬಂಧನ

07/04/2024


Provided by

ಪಂಜಾಬ್ ನ ತಾರ್ನ್ ತರಣ್ ಜಿಲ್ಲೆಯಲ್ಲಿ 55 ವರ್ಷದ ಮಹಿಳೆ ಮೇಲೆ ಹಲ್ಲೆ ನಡೆಸಿ ಅರೆಬೆತ್ತಲೆಯಾಗಿ ಮೆರವಣಿಗೆ ನಡೆಸಿದ ಘಟನೆ ನಡೆದಿದೆ. ಈಕೆಯ ಮಗ ಯುವತಿಯೊಂದಿಗೆ ಓಡಿಹೋಗಿ ಅವಳ ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಅವಳನ್ನು ಮದುವೆಯಾಗಿದ್ದ. ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ಮಹಿಳೆಯನ್ನು ಅರೆಬೆತ್ತಲೆ ಸ್ಥಿತಿಯಲ್ಲಿ ತೋರಿಸುವ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.


Provided by

ಈ ಕುರಿತು ಇಂಡಿಯಾ ಟುಡೇ ಜೊತೆ ಮಾತನಾಡಿದ 55 ವರ್ಷದ ಸಂತ್ರಸ್ತೆ, ‘ನನ್ನ ಮಗ ಕಳೆದ ತಿಂಗಳು ಆ ಯುವತಿಯನ್ನು ಮದುವೆ ಆಗಿದ್ದ. ತನ್ನ ಸೊಸೆಯ ಕುಟುಂಬವು ಈ ಮದುವೆಯ ಬಗ್ಗೆ ಅಸಮಾಧಾನಗೊಂಡಿತ್ತು. ಅವರ ಕುಟುಂಬದವರಲ್ಲಿ ಐದು ಮಂದಿ ನಾನಿದ್ದ ಸ್ಥಳಕ್ಕೆ ಬಂದು ಥಳಿಸಿ ತನ್ನ ಬಟ್ಟೆಗಳನ್ನು ಹರಿದುಹಾಕಿದ್ದಾರೆ ಎಂದು ಅವರು ದೂರಿದ್ದಾರೆ. ಅವರು ಅವಳನ್ನು ಅರೆಬೆತ್ತಲೆ ಸ್ಥಿತಿಯಲ್ಲಿ ವೀಡಿಯೊ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಘಟನೆಯಲ್ಲಿ ಭಾಗಿಯಾಗಿರುವ ಎಲ್ಲಾ ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡಗಳನ್ನು ರಚಿಸಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ತಾರ್ನ್ ತರಣ್) ಅಶ್ವಿನಿ ಕಪೂರ್ ತಿಳಿಸಿದ್ದಾರೆ. ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇತರ ಇಬ್ಬರನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ.


Provided by

ವೈರಲ್ ಆದ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್‌ಗಳಿಂದ ತೆಗೆದುಹಾಕಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಮಹಿಳೆಯ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 354 ಬಿ (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲವನ್ನು ಬಳಸುವುದು), 354 ಡಿ (ಹಿಂಬಾಲಿಸುವುದು), 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡುವುದು) ಮತ್ತು 149 (ಕಾನೂನುಬಾಹಿರ ಸಭೆ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ